ವಾಯು ಮಾಲಿನ್ಯ ಹಾಗೂ ಹವಾಮಾನ ಬದಲಾವಣೆ ಒಂದಕ್ಕೊಂದು ಸಂಬಂಧ ಹೊಂದಿದ್ದು, ಅವುಗಳನ್ನು ತಡೆಗಟ್ಟಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಂಶೋಧಕರ ತಂಡ ಅಭಿಪ್ರಾಯಪಟ್ಟಿದೆ.

ನವದೆಹಲಿ(ಫೆ.19): ದೇಶದಲ್ಲಿ ವಾಯುಮಾಲಿನ್ಯದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅದರಲ್ಲೂ ಭಾರತದಲ್ಲಿ ವಾಯುಮಾಲಿನ್ಯದಿಂದ ಪ್ರತಿ ನಿಮಿಷ ಸರಾಸರಿ ಎರಡು ಮಂದಿ ಅಸುನೀಗುತ್ತಿದ್ದಾರೆ ಎಂಬ ಆಘಾತಕಾರಿ ಅಂಶ ಹೊಸ ಸಂಶೋಧನೆಯಿಂದ ಹೊರಬಿದ್ದಿದೆ.

ದ ಲಾನ್ಸೆಟ್ ಎಂಬ ವರದಿಯ ಪ್ರಕಾರ, ಜಗತ್ತಿನ ಕೆಲವು ಮಾಲಿನ್ಯ ಹೊಂದಿರುವ ದೇಶಗಳ ಪೈಕಿ ಭಾರತದಲ್ಲಿ ವಾಯುಮಾಲಿನ್ಯದಿಂದ ಪ್ರತಿ ವರ್ಷ ಒಂದು ಮಿಲಿಯನ್'ಗೂ ಅಧಿಕ ಮಂದಿ ಅಸುನೀಗುತ್ತಿದ್ದಾರೆ ಎಂದು ತಿಳಿಸಿದೆ.

ವಾಯು ಮಾಲಿನ್ಯ ಹಾಗೂ ಹವಾಮಾನ ಬದಲಾವಣೆ ಒಂದಕ್ಕೊಂದು ಸಂಬಂಧ ಹೊಂದಿದ್ದು, ಅವುಗಳನ್ನು ತಡೆಗಟ್ಟಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಂಶೋಧಕರ ತಂಡ ಅಭಿಪ್ರಾಯಪಟ್ಟಿದೆ.

ಇತ್ತೀಚಿನ ದಿನಗಳಲ್ಲಿ ವಾಯುಮಾಲಿನ್ಯವು ಜನರ ಪಾಲಿಗೆ ಮಾರಕ ರೂಪವಾಗಿ ಪರಿಣಮಿಸಿದೆ. ಅದರಲ್ಲೂ ಕಲ್ಲಿದ್ದಲು ಮೂಲದ ಹೊಗೆಯಿಂದ ಶೇ.50 ರಷ್ಟು ವಾಯುಮಾಲಿನ್ಯ ಸಂಭವಿಸುತ್ತಿದೆ ಎಂದು ವರದಿ ತಿಳಿಸಿದೆ.