ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಹಾವು-ಮುಂಗುಸಿಗಳಂತೆ ಕಚ್ಚಾಡುತ್ತಿದ್ದ ಎಸ್ಪಿ-ಬಿಎಸ್ಪಿ ಜಗಳವನ್ನು ಕೈಬಿಟ್ಟು ಮೈತ್ರಿ ಮಾಡಿಕೊಳ್ಳಲು ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಶತಯಗತಾಯ ಭಾರತೀಯ ಜನತಾ ಪಕ್ಷವನ್ನು ಮಣ್ಣು ಮುಕ್ಕಿಸಬೇಕೆಂದು ರಣತಂತ್ರ ಹೆಣೆಯುತ್ತಿವೆ. ಆದರೆ ಈ ಬಗ್ಗೆ ಅಖಿಲೇಶ್ ಯಾದವ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ನವದೆಹಲಿ (ಮಾ.09): ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಹಾವು-ಮುಂಗುಸಿಗಳಂತೆ ಕಚ್ಚಾಡುತ್ತಿದ್ದ ಎಸ್ಪಿ-ಬಿಎಸ್ಪಿ ಜಗಳವನ್ನು ಕೈಬಿಟ್ಟು ಮೈತ್ರಿ ಮಾಡಿಕೊಳ್ಳಲು ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಶತಯಗತಾಯ ಭಾರತೀಯ ಜನತಾ ಪಕ್ಷವನ್ನು ಮಣ್ಣು ಮುಕ್ಕಿಸಬೇಕೆಂದು ರಣತಂತ್ರ ಹೆಣೆಯುತ್ತಿವೆ. ಆದರೆ ಈ ಬಗ್ಗೆ ಅಖಿಲೇಶ್ ಯಾದವ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

“ಮೈತ್ರಿಯ ಬಗ್ಗೆ ಈಗೇನೂ ಹೇಳಲು ಸಾಧ್ಯವಿಲ್ಲ. ಈ ಬಾರಿ ಚುನಾವಣೆಯಲ್ಲಿ ಬಹುಮತದೊಂದಿಗೆ ಗೆಲ್ಲುತ್ತೇವೆಂಬ ವಿಶ್ವಾಸ ನನಗಿದೆ. ನಮ್ಮ ಹಾಗೂ ಬಿಎಸ್ಪಿ ಮೈತ್ರಿ ಬಗ್ಗೆ ವದಂತಿಗಳಿವೆ. ಚುನಾವಣಾ ಫಲಿತಾಂಶದ ನಂತರದ ಸ್ಥಿತಿ ಬಗ್ಗೆ ನಮಗೆ ಗೊತ್ತಿಲ್ಲ. ಸರ್ಕಾರ ರಚಿಸಲು ಅಗತ್ಯ ಬಿದ್ದರೆ ನೋಡೋಣ. ರಾಷ್ಟ್ರಪತಿ ಆಳ್ವಿಕೆಯನ್ನು ಯಾರೂ ಇಷ್ಟಪಡುವುದಿಲ್ಲ” ಎಂದಿದ್ದಾರೆ.