ಬೆಂಗಳೂರು (ಮೇ. 30):  ಲೋಕಸಭೆ ಚುನಾವಣೆ ವೇಳೆ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ವರ್ಗಾವಣೆಯಾಗಿದ್ದ ಅಕ್ರಮ ಪಾಷಾ ಇದೀಗ ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. 

ಹಾಸನ ಜಿಲ್ಲಾಧಿಕಾರಿಯಾಗಿದ್ದ ಅಕ್ರಮ ಪಾಷಾ ಅವರನ್ನು ಚುನಾವಣಾ ಸಮಯದಲ್ಲಿ ವರ್ಗಾವಣೆಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು. ಬುಧವಾರ ತಕ್ಷಣ ಜಾರಿಗೆ ಬರುವಂತೆ ಪಾಷಾ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.  ಆದರೆ, ಇದುವರೆಗೆ ಜಿಲ್ಲಾಧಿಕಾರಿಯಾಗಿದ್ದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರಿಗೆ ಯಾವುದೇ ಸ್ಥಳವನ್ನು ನಿಯೋಜನೆ ಮಾಡಿಲ್ಲ.