ಹುತಾತ್ಮರ ಕುಟುಂಬದ ಕ್ಷೇಮಾಭಿವೃದ್ಧಿಗಾಗಿ ಆರಂಭವಾದ 'ಭಾರತ್ ಕೇ ವೀರ್' ಅಭಿಯಾನದ ಗೀತೆಗೆ ಚಾಲನೆ ನೀಡಿದ್ದು, ಈ ಕಾರ್ಯಕ್ರಮದಲ್ಲಿ 12.93 ಕೋಟಿ ರೂ. ಸಂಗ್ರಹಿಸಲಾಗಿದೆ.
ಹೊಸದಿಲ್ಲಿ: ಹುತಾತ್ಮರ ಕುಟುಂಬದ ಕ್ಷೇಮಾಭಿವೃದ್ಧಿಗಾಗಿ ಆರಂಭವಾದ 'ಭಾರತ್ ಕೇ ವೀರ್' ಅಭಿಯಾನದ ಗೀತೆಗೆ ಚಾಲನೆ ನೀಡಿದ್ದು, ಈ ಕಾರ್ಯಕ್ರಮದಲ್ಲಿ 12.93 ಕೋಟಿ ರೂ. ಸಂಗ್ರಹಿಸಲಾಗಿದೆ.
ಬಾಲಿವುಡ್ ನಟ ಅಕ್ಷಯ್ ಕುಮಾರ್ ನೇತೃತ್ವದಲ್ಲಿ ಆರಂಭವಾದ ಈ ಅಭಿಯಾನದಲ್ಲಿ ಸಂಗ್ರಹವಾದ ಹಣವನ್ನು ಹುತಾತ್ಮರ ಕುಟುಂಬಕ್ಕೆ ಹಾಗೂ ಸೈನಿಕರ ಮಕ್ಕಳ ಶಿಕ್ಷಣಕ್ಕೆ ಮೀಸಲಿಡಲಾಗುವುದು.
ಕೈಲಾಶ್ ಖೇರ್ ಸಂಗೀತ ಸಂಯೋಜಿಸಿ, ಹಾಡಿರುವ ಈ ಗೀತೆಯನ್ನು ಡೌನ್‌ಲೋಡ್ ಮಾಡಿಕೊಂಡಾಗ ಬಂದ ಹಣವೂ ಸೈನಿಕರ ಕುುಟಂಬದ ಅಗತ್ಯಗಳನ್ನು ಪೂರೈಸಲು ಬಳಸಲಾಗುವುದು. ಮೃತ ಸೈನಿಕರ ಕುಟುಂಬಕ್ಕೆ ಕನಿಷ್ಠ 1 ಕೋಟಿ ರೂ. ಸಿಗುವಂತೆ ಮಾಡುವುದೇ ಈ ಕಾರ್ಯಕ್ರಮದ ಉದ್ದೇಶ.
ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಮಂತ್ರಿ ರಾಜನಾಥ್ ಸಿಂಗ್, ಕೇಂದ್ರ ಸಚಿವರಾದ ಕಿರೆಣ್ ರಿಜಿಜು, ಹನ್ಸ್‌ರಾಜ್ ಅಹಿರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮುಂತಾದವರು ಉಪಸ್ಥಿತರಿದ್ದರು.
