ಅಂತಾರಾಷ್ಟ್ರೀಯ ಇಂಗ್ಲಿಷ್ ನ್ಯೂಸ್ ಚಾನೆಲ್ ‘ಅಲ್ ಜಝೀರಾ’ಗೆ ನೀಡಿದ್ದ ಭದ್ರತಾ ಅನುಮತಿಯನ್ನು ಕೇಂದ್ರ ಸರ್ಕಾರ ಹಿಂಪಡೆದು ಕೊಂಡಿದೆ.
ನವದೆಹಲಿ: ಅಂತಾರಾಷ್ಟ್ರೀಯ ಇಂಗ್ಲಿಷ್ ನ್ಯೂಸ್ ಚಾನೆಲ್ ‘ಅಲ್ ಜಝೀರಾ’ಗೆ ನೀಡಿದ್ದ ಭದ್ರತಾ ಅನುಮತಿಯನ್ನು ಕೇಂದ್ರ ಸರ್ಕಾರ ಹಿಂಪಡೆದು ಕೊಂಡಿದೆ.
ಹೀಗಾಗಿ ಆ ವಾಹಿನಿ ಸದ್ಯದಲ್ಲೇ ದೇಶದಲ್ಲಿ ಪ್ರಸಾರ ಸ್ಥಗಿತಗೊಳಿಸಬೇಕಾಗುತ್ತದೆ. ಖತಾರ್ ಮೂಲದ ಈ ವಾಹಿನಿ ವಿರುದ್ಧ ಸರ್ಕಾರ ಈ ಕ್ರಮ ಕೈಗೊಂಡಿದ್ದಕ್ಕೆ ಏನು ಕಾರಣ ಎಂಬುದು ಗೊತ್ತಾಗಿಲ್ಲ.
ಆದರೆ, ಜಮ್ಮು-ಕಾಶ್ಮೀರದಲ್ಲಿನ ಪರಿಸ್ಥಿತಿ ಕುರಿತು ವಾಹಿನಿ ಸಾಕ್ಷ್ಯಚಿತ್ರ ಪ್ರಸಾರ ಮಾಡಿದ್ದು ಭದ್ರತಾ ಸಂಸ್ಥೆಗಳ ಕೆಂಗಣ್ಣಿಗೆ ಗುರಿಯಾಗಿತ್ತು ಎಂದು ಹೇಳಲಾಗಿದೆ.
