ಆ.22ರಂದು ರಾಷ್ಟ್ರವ್ಯಾಪಿ ನಡೆಯುತ್ತಿರುವ ಮುಷ್ಕರದಲ್ಲಿ 12 ಲಕ್ಷಕ್ಕೂ ಅಧಿಕ ನೌಕರರು ಭಾಗವಹಿಸಲಿದ್ದಾರೆ.

ಬೆಂಗಳೂರು(ಆ.18): ರಾಷ್ಟ್ರೀಕೃತ ಬ್ಯಾಂಕ್‌ಗಳ ವಿಲೀನ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆ.22ರಂದು ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ ನಡೆಯಲಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ರಾಜ್ಯ ಸಂಚಾಲಕ ವಸಂತ ರೈ, ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳನ್ನು ವಿಲೀನಗೊಳಿಸುವ ಮೂಲಕ ಬ್ಯಾಂಕಿಂಗ್ ಕ್ಷೇತ್ರವನ್ನು ನಾಶ ಮಾಡುವ ವ್ಯವಸ್ಥಿತವಾದ ಹುನ್ನಾರ ಮಾಡುತ್ತಿದೆ ಎಂದು ದೂರಿದರು.

ಆ.22ರಂದು ರಾಷ್ಟ್ರವ್ಯಾಪಿ ನಡೆಯುತ್ತಿರುವ ಮುಷ್ಕರದಲ್ಲಿ 12 ಲಕ್ಷಕ್ಕೂ ಅಧಿಕ ನೌಕರರು ಭಾಗವಹಿಸಲಿದ್ದಾರೆ. ಬೆಂಗಳೂರಿನ ಪುರಭವನದ ಮುಂಭಾಗ ಶುಕ್ರವಾರ ಸಂಜೆ ೫ಕ್ಕೆ ಧರಣಿ ನಡೆಯಲಿದೆ ಎಂದರು.