ಬೆಂಗಳೂರು [ಜು.08] : ಕರ್ನಾಕದಲ್ಲಿ ರಾಜಕೀಯ ಹೈ ಡ್ರಾಮ ಮೇರು ಹಂತಕ್ಕೆ ತಲುಪಿದೆ. ಈಗಾಗಲೇ 14 ಶಾಸಕರು ರಾಜೀನಾಮೆ ನೀಡಿ ಮುಂಬೈ ಹೋಟೆಲ್ ಸೇರಿಕೊಂಡಿದ್ದಾರೆ. 

"

ಇತ್ತ  ಕಾಂಗ್ರೆಸ್ ನ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದು, ಅದರಂತೆ ಜೆಡಿಎಸ್ ನ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. 

ಕಾಂಗ್ರೆಸ್ ನ 21 ಸಚಿವರು ರಾಜೀನಾಮೆ ನೀಡಿದ್ದು, ಹಾಗೆಯೇ ಜೆಡಿಎಸ್ ಮ 9 ಸಚಿವರೂ ರಾಜೀನಾಮೆ ನೀಡಿದ್ದಾರೆ ಎಂದು ಸಿಎಂ ಸ್ಪಷ್ಟಪಡಿಸಿದರು. 

ಎಲ್ಲಾ ಸಚಿವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಶೀಘ್ರ ಸಚಿವ ಸಂಪುಟ ಪುನಾರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.