ಬೆಂಗಳೂರು (ಸೆ.30): ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಾಳೆ ಸರ್ವಪಕ್ಷ ಸಭೆ ಕರೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸರ್ಕಾರದ ಮುಂದಿನ ನಡೆ ಏನಾಗಿರಬೇಕೆಂದು ಚರ್ಚಿಸಲು ನಾಳೆ 5 ಗಂಟೆಗೆ ವಿಧಾನ ಸೌಧದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅ.1ರಿಂದ ಅ.6 ರವರೆಗೆ ತಮಿಳುನಾಡಿಗೆ ನೀರು ಬಿಡಬೇಕು ಎಂದು ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಆದೇಶಿಸಿದೆ.

ಇನೊಂದು ಕಡೆ ಕರ್ನಾಟಕ ಪರ ವಕೀಲ ಫಾಲಿ ಎಸ್. ನಾರಿಮನ್ ವಾದ ಮಂಡನೆಯಿಂದ ಹಿಂದೆ ಸರಿದಿದ್ದಾರೆ.