ಕಣಿವೆ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಆರ್ಟಿಕಲ್ 370 ರದ್ದು| ಎರಡು ತಿಂಗಳ ಬಳಿಕ ಪ್ರವಾಸಿಗರಿಗೆ ಸಿಕ್ತು ಕಣಿವೆ ನಾಡು ನೋಡುವ ಭಾಗ್ಯ| ಪ್ರವಾಸಿಗರಿಗೆ ಪ್ರವೇಶ ಸಿಕ್ಕ ಬೆನ್ನಲ್ಲೇ ಎಲ್ಲಾ ಪೋಸ್ಟ್ ಪೇಯ್ಡ್ ಮೊಬೈಲ್ ಪುನಾರಂಭ?
ಶ್ರೀನಗರ[ಅ.12]: ಜಮ್ಮು -ಕಾಶ್ಮೀರಕ್ಕೆ ಪ್ರವಾಸಿಗರಿಗೆ ಅನುಮತಿ ನೀಡಿದ ಬೆನ್ನಲ್ಲೇ ಕೇಂದ್ರದಿಂದ ಮತ್ತೊಂದು ಸಿಹಿಸುದ್ದಿ ಹೊರಬೀಳುವ ಸಾಧ್ಯತೆ ಇದೆ. ಪೋಸ್ಟ್‌ಪೇಯ್ಡ್ ಮೊಬೈಲ್‌ಗಳ ಮೇಲಿನ ನಿರ್ಬಂಧವನ್ನು ಸರ್ಕಾರ ಸಡಿಲಗೊಳಿಸಲಿದ್ದು, ಶನಿವಾರದಿಂದ ಪುನರಾರಂಭಗೊಳ್ಳುವ ಸಾಧ್ಯತೆ ಇದೆ.
ಜಮ್ಮು-ಕಾಶ್ಮೀರಕ್ಕಿದ್ದ ವಿಶೇಷಾಧಿಕಾರ ರದ್ದಾದ ಬಳಿಕ ಎಲ್ಲ ಮಾದರಿಯ ಮೊಬೈಲ್ ಕರೆಗಳನ್ನು ನಿರ್ಬಂಧಿಸಲಾಗಿತ್ತು. ಕಣಿವೆ ರಾಜ್ಯ ಸಹಜ ಸ್ಥಿತಿಗೆ ಮರಳುತ್ತಿರುವುದರಿಂದ ಮೊದಲ ಹಂತದಲ್ಲಿ ಪೋಸ್ಟ್‌ಪೇಯ್ಡ್ ಮೊಬೈಲ್‌ಗಳಿಗೆ ನಿರ್ಬಂಧ ಸಡಿಸಲಾಗುತ್ತಿದೆ. ಆದರೆ, ಇಂಟರ್ನೆಟ್ ಸಂಪರ್ಕಕ್ಕೆ ಅನುಮತಿ ನೀಡಲಾಗಿಲ್ಲ.
ಮುಂದಿನ ದಿನಗಳಲ್ಲಿ ಪ್ರೀಪೇಯ್ಡ್ ಮೊಬೈಲ್‌ಗಳ ಮೇಲಿನ ನಿರ್ಬಂಧವನ್ನೂ ತೆರವುಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತ್ರೋರಾತ್ರಿ ಪ್ರವಾಸಿಗರನ್ನು ಕಾಶ್ಮೀರದಿಂದ ಹೊರಹಾಕಿದ್ದರು!
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಪ್ರವಾಸಿಗರಿಗೆ ಮತ್ತು ಅಮರನಾಥ ಯಾತ್ರಿಕರಿಗೆ ಉಗ್ರರಿಂದ ಅಪಾಯ ಇರುವ ಸುಳಿವು ನೀಡಿ ಕಳೆದ ಆಗಸ್ಟ್ 2ರಂದು ಅಮರನಾಥ ಯಾತ್ರಿಕರು ಮತ್ತು ಪ್ರವಾಸಿಗರು ಕಾಶ್ಮೀರವನ್ನು ಕೂಡಲೇ ತೊರೆದು ವಾಪಸಾಗಬೇಕೆಂದು ಅಲ್ಲಿನ ರಾಜ್ಯ ಸರ್ಕಾರ ದಿಢೀರ್ ಸೂಚನೆ ನೀಡಿತ್ತು. ನಂತರ ಕಣಿವೆ ರಾಜ್ಯದಲ್ಲಿದ್ದ ಪ್ರವಾಸಿಗರನ್ನು ಮೂರು ದಿನದಲ್ಲಿ ಸಂಪೂರ್ಣವಾಗಿ ಹೊರ ಕಳಿಸಲಾಗಿತ್ತು.
ಅದಕ್ಕೂ ಮುನ್ನ ಕೇಂದ್ರ ಸರ್ಕಾರ ಕಾಶ್ಮೀರದಲ್ಲಿ ಹೆಚ್ಚುವರಿ ಸೇನೆಯನ್ನು ಜಮಾವಣೆ ಮಾಡಿದಾಗಲೇ 20000 ಯಾತ್ರಾರ್ಥಿಗಳು ಮತ್ತು ಪ್ರವಾಸಿಗರು ಹಾಗೂ 2 ಲಕ್ಷ ಕಾರ್ಮಿಕರು ರಾಜ್ಯ ತೊರೆದಿದ್ದರು.
ನಂತರ ಆಗಸ್ಟ್ 5ರಂದು ಕೇಂದ್ರ ಸರ್ಕಾರ ಕಣಿವೆ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿ ಜಮ್ಮು-ಕಾಶ್ಮೀರವನ್ನು ಮೂರು ಭಾಗ ಮಾಡಿತು. ಜೊತೆಗೆ ಹೊರಗಿನ ಯಾರೂ ರಾಜ್ಯ ಪ್ರವೇಶಿಸದಂತೆ ನಿಷೇಧ ಹೇರಿತು. ವಿಶೇಷ ಸ್ಥಾನಮಾನ ಹಿಂಪಡೆತದಿಂದ ಅಲ್ಲಿ ಹಿಂಸಾಚಾರ ಉಂಟಾಗಬಹುದು, ಗಲಭೆ ಎದ್ದು ಉದ್ವಿಗ್ನ ಪರಿಸ್ಥಿತಿ ತಲೆದೋರಬಹುದೆಂದು ಕೇಂದ್ರ ಸರ್ಕಾರ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿತ್ತು.
ಕಣಿವೆಯಲ್ಲಿ ನಡೆಯುತ್ತಿರುವುದು ಧರ್ಮಯುದ್ಧ: ಇಮ್ರಾನ್ ಇವಾಗ ತೆಪ್ಪಗಿದ್ದರೆ ಚೆಂದ!
