ಸರ್ಕಾರವು ರಾಜ್ಯಕ್ಕೆ ಒಳಿತಾಗುವ 40ಕ್ಕೂ ಹೆಚ್ಚು ಸುಧಾರಣೆಗಳನ್ನು ಜಾರಿಗೊಳಿಸಿದ್ದು,ಇವುಗಳಲ್ಲಿ ರಾಜ್ಯ ಸರ್ಕಾರದ ಎಲ್ಲ ಸಿಬ್ಬಂದಿ ತಮ್ಮ ಮಕ್ಕಳನ್ನು ಸರ್ಕಾರಿ ಇಲ್ಲವೆ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಸೇರಿಸಬೇಕೆಂದು ಕಾನೂನು ರಚಿಸಿದೆ. ಆದರೆ ಮುಖ್ಯಮಂತ್ರಿಗಳು ಅಧಿಕೃತ ಆದೇಶ ಹೊರಡಿಸಿದರಷ್ಟೆ ಕಾನೂನು ಪರಿಪೂರ್ಣವಾಗಿ ಅನ್ವಯವಾಗಲಿದೆ.
ಚೆನ್ನೈ(ಜೂ.06): ತಮಿಳು ನಾಡು ಸರ್ಕಾರ ಹೊಸ ಕಾನೂನನ್ನು ಜಾರಿಗೊಳಿಸಿದ್ದು,ಎಲ್ಲ ರಾಜ್ಯ ಸರ್ಕಾರದ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕೆಂದು ಆದೇಶಿಸಿದೆ.
ಸರ್ಕಾರವು ರಾಜ್ಯಕ್ಕೆ ಒಳಿತಾಗುವ 40ಕ್ಕೂ ಹೆಚ್ಚು ಸುಧಾರಣೆಗಳನ್ನು ಜಾರಿಗೊಳಿಸಿದ್ದು,ಇವುಗಳಲ್ಲಿ ರಾಜ್ಯ ಸರ್ಕಾರದ ಎಲ್ಲ ಸಿಬ್ಬಂದಿ ತಮ್ಮ ಮಕ್ಕಳನ್ನು ಸರ್ಕಾರಿ ಇಲ್ಲವೆ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಸೇರಿಸಬೇಕೆಂದು ಕಾನೂನು ರಚಿಸಿದೆ. ಆದರೆ ಮುಖ್ಯಮಂತ್ರಿಗಳು ಅಧಿಕೃತ ಆದೇಶ ಹೊರಡಿಸಿದರಷ್ಟೆ ಕಾನೂನು ಪರಿಪೂರ್ಣವಾಗಿ ಅನ್ವಯವಾಗಲಿದೆ.
ಸರಕಾರಿ ನೌಕರರೇ ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಹಿಂಜರಿಯುವುದು ಸರಿಯಲ್ಲ. ಸರಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಂತೆ ಉನ್ನತ ದರ್ಜೆಗೆ ಏರಿಸಲಾಗುವುದು ಎಂದು ಈ ಹಿಂದೆ ಭರವಸೆ ನೀಡಿದ್ದರು. ಅಲ್ಲದೆ ಸರಕಾರಿ ಶಾಲೆಗಳಲ್ಲಿ ಉತ್ತಮ ಮೂಲಭೂತ ಸೌಕರ್ಯಗಳಿಲ್ಲ ಎಂದು ದೂರಲಾಗುತ್ತಿದೆ. ಉತ್ತಮ ಸೌಕರ್ಯಗಳನ್ನು ಒದಗಿಸಿದರೂ ಶಾಲೆಗೆ ಬರುವ ಮಕ್ಕಳ ಹಾಜರಾತಿ ಕಡಿಮೆಯಿದೆ ಎಂದು ತಮಿಳುನಾಡು ಸಿಎಂ ಪಳನಿಸ್ವಾಮಿ ಬೇಸರ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ನೂತನ ನಿಯಮಗಳನ್ನು ರಚಿಸಲಾಗಿದೆ.
(ಸಾಂದರ್ಭಿಕ )