ಜಿ.ಪಂ ಸದಸ್ಯ ಯೋಗೀಶ್ ಗೌಡ ಪತ್ನಿ ಮಲ್ಲಮ್ಮ ವಿರುದ್ಧ ಸಂಬಂಧಿಕರಿಗೆ ಹಲ್ಲೆಗೈದ ಆರೋಪ ಕೇಳಿ ಬಂದಿದೆ.
ಧಾರವಾಡ (ಜ.01): ಜಿ.ಪಂ ಸದಸ್ಯ ಯೋಗೀಶ್ ಗೌಡ ಪತ್ನಿ ಮಲ್ಲಮ್ಮ ವಿರುದ್ಧ ಸಂಬಂಧಿಕರಿಗೆ ಹಲ್ಲೆಗೈದ ಆರೋಪ ಕೇಳಿ ಬಂದಿದೆ.
ಮಲ್ಲಮ್ಮ ಕಾಂಗ್ರೆಸ್ ಸೇರಿರುವುದನ್ನು ವಿರೋಧಿಸಿದ್ದರು ಎಂಬ ಕಾರಣಕ್ಕೆ ಅಕ್ಕ, ತಂಗಿ ಸೇರಿ ಸಂಬಂಧಿಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಸಂಬಂಧಿಕರು ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಲಮ್ಮ ಹಾಗೂ ಬೆಂಬಲಿಗರು ಬಂದು ಮಲ್ಲಮ್ಮನ ಅಕ್ಕ ಶೋಭಾ, ತಂಗಿ ಸುಮಾ, ತಮ್ಮನ ಪತ್ನಿ ಅಂಜನಾ ಹಾಗೂ ಯೋಗೇಶ್ ಗೌಡ ಅಕ್ಕ ಅಕ್ಕಮಹಾದೇವಿ ಮೇಲೆ ದಾಳಿ ನಡೆಸಿದ್ದಾರೆ. ಸೀರೆ ಎಳೆದಾಡಿ, ರಾಡ್, ಕಟ್ಟಿಗೆಗಳಿಂದ ಹಲ್ಲೆ ನಡೆಸಿದ್ದಾರೆ. ಜೊತೆಗೆ ಜೀವ ಬೆದರಿಕೆ ಹಾಕಿದ್ದಾರೆ.
