ಆಧಾರರಹಿತ ಆರೋಪಗಳನ್ನು ಹೊರಿಸುವುದು ಕಾಂಗ್ರೆಸ್’ನ ಚಾಳಿ ಎಂದಿರುವ ಬಿಜೆಪಿ ನಾಯಕ ಎಸ್. ಪ್ರಕಾಶ್, ಚರ್ಚೆಯಲ್ಲಿರುವ ಜಲವಿದ್ಯುತ್ ಯೋಜನೆಗೆ ಕಾಂಗ್ರೆಸ್ ತನ್ನ ಅಧಿಕಾರಾವಧಿಯಲ್ಲೇ ಹಸಿರು ನಿಶಾನೆ ನೀಡಿದೆ. ಹಗರಣದ ಬಗ್ಗೆ ಸಾಕ್ಷ್ಯಾಧಾರಗಳಿದ್ದಲ್ಲಿ ಅವುಗಳನ್ನು ತನಿಖಾಧಿಕಾರಿ ಮುಂದೆ ಸಲ್ಲಿಸಲಿ ಎಂದು ಅವರು ಹೇಳಿದ್ದಾರೆ.

ಬೆಂಗಳೂರು (ಡಿ.14): ಕೇಂದ್ರ ಸಚಿವ ಕಿರಣ್ ರಿಜಿಜು ಹಗರಣವೆಸಗಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, ಆರೋಪದಲ್ಲಿ ಸತ್ಯಾಂಶವಿದ್ದರೆ ಅದಕ್ಕೆ ಸಾಕ್ಷ್ಯವೊದಗಿಸಿ ಎಂದು ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಸವಾಲೆಸೆದಿದೆ.

ಆಧಾರರಹಿತ ಆರೋಪಗಳನ್ನು ಹೊರಿಸುವುದು ಕಾಂಗ್ರೆಸ್’ನ ಚಾಳಿ ಎಂದಿರುವ ಬಿಜೆಪಿ ನಾಯಕ ಎಸ್. ಪ್ರಕಾಶ್, ಚರ್ಚೆಯಲ್ಲಿರುವ ಜಲವಿದ್ಯುತ್ ಯೋಜನೆಗೆ ಕಾಂಗ್ರೆಸ್ ತನ್ನ ಅಧಿಕಾರಾವಧಿಯಲ್ಲೇ ಹಸಿರು ನಿಶಾನೆ ನೀಡಿದೆ. ಹಗರಣದ ಬಗ್ಗೆ ಸಾಕ್ಷ್ಯಾಧಾರಗಳಿದ್ದಲ್ಲಿ ಅವುಗಳನ್ನು ತನಿಖಾಧಿಕಾರಿ ಮುಂದೆ ಸಲ್ಲಿಸಲಿ ಎಂದು ಅವರು ಹೇಳಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಬೃಹತ್ ಜಲ ವಿದ್ಯುತ್ ಯೋಜನೆಯಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು 450 ಕೋಟಿ ರೂ ಅಕ್ರಮ ನಡೆಸಿದ್ದಾರೆ. ಇದಕ್ಕೆ ಸಂಬಂಧಪಟ್ಟ ಆಡಿಯೋ ಹಾಗೂ ಇತರ ಸಾಕ್ಷಿಗಳಿವೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಿರಣ್ ರಿಜಿಜು ರಾಜಿನಾಮೆ ಕೊಡಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.

ಕಿರಣ್ ರಿಜಿಜು ಸಂಬಂಧಿಕ ಗೋಪಿ ರಿಜಿಜು ಈ ಯೋಜನೆಯ ಗುತ್ತಿಗೆಯನ್ನು ಪಡೆದಿದ್ದಾರೆ. ಇವರು 2015 ಡಿಸೆಂಬರ್ ನಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿರುವ ಆಡಿಯೋವನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.