Asianet Suvarna News Asianet Suvarna News

ಸಮ್ಮಿಶ್ರ ಸರ್ಕಾರದ ಬಗ್ಗೆ ಖರ್ಗೆ ಹೇಳಿದ್ದೇನು..?

ಸಮ್ಮಿಶ್ರ ಸರ್ಕಾರ ನಿಭಾಯಿಸುವುದು ತುಂಬಾ ಕಷ್ಟ. ಆದರೆ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದ ಸವಾಲುಗಳನ್ನು ಧೈರ್ಯವಾಗಿ ಎದುರಿಸಬೇಕು ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದಾರೆ.

Alliance Government Is Not An Easy Task Says Mallikarjun Kharge
Author
Bengaluru, First Published Jul 16, 2018, 7:52 AM IST

ಬೆಂಗಳೂರು : ಸಮ್ಮಿಶ್ರ ಸರ್ಕಾರ ನಿಭಾಯಿಸುವುದು ತುಂಬಾ ಕಷ್ಟ. ಆದರೆ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದ ಸವಾಲುಗಳನ್ನು ಧೈರ್ಯವಾಗಿ ಎದುರಿಸಬೇಕು ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದಾರೆ. ಭಾನುವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಸಮ್ಮಿಶ್ರ ಸರ್ಕಾರದಲ್ಲಿ ಹಲವು ಸಮಸ್ಯೆಗಳು ಬರುತ್ತವೆ. 

ಹೀಗಾಗಿ ಸಮ್ಮಿಶ್ರ ಸರ್ಕಾರ ನಡೆಸುವುದು ಯಾವಾಗಲೂ ಕಠಿಣ ಕೆಲಸ. ಆದರೆ ಜಾತ್ಯತೀತ ಪಕ್ಷಗಳಿಗೆ ಬೆಂಬಲಿಸಿದ ಜನತೆಗೆ ಉತ್ತಮ ಸಂದೇಶ ನೀಡ ಬೇಕಿದೆ. ಕುಮಾರಸ್ವಾಮಿ ಅವರು ಎಂತಹದ್ದೇ ಪರಿಸ್ಥಿತಿ ಬಂದರೂ ಧೈರ್ಯವಾಗಿ ಎದುರಿಸ ಬೇಕು. ಈ ಮೂಲಕ ಜನರ ಆಶೋತ್ತರ ಗಳನ್ನು ಈಡೇರಿಸಬೇಕು ಎಂದು ಹೇಳಿದರು. 

ಶನಿವಾರ ಕುಮಾರ ಸ್ವಾಮಿ ಅವರು, ಸಮ್ಮಿಶ್ರ ಸರ್ಕಾರ ದಲ್ಲಿ ನೋವು ನುಂಗಿ ವಿಷಕಂಠ ನಾಗಿದ್ದೇನೆ. ನಾನು ಸಂತಸದಲ್ಲಿ ಇಲ್ಲ ಎಂದು ಹೇಳಿ ಕಣ್ಣೀರಿಟ್ಟಿದ್ದರು.

Follow Us:
Download App:
  • android
  • ios