ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದಿದೆ. ರಾಜ್ಯದಲ್ಲಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಇದಕ್ಕೆ ಕಾರಣ ಕೇಂದ್ರದಲ್ಲಿ ಅಧಿಕಾರ ನಡೆಸಲಿ ಎಂದೇ ಹೊರತು  ರಾಜ್ಯದಲ್ಲಿ ಸರ್ಕಾರ ಬೀಳಿಸಿ, ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿ ಎಂದಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ  ಸರಣಿ ಟ್ವೀಟ್ ಮಾಡಿದ್ದಾರೆ. 

ಲೋಕಸಭಾ ಫಲಿತಾಂಶ ನಮಗೆ ವಿರುದ್ಧವಾಗಿ ಬಂದ ಮಾತ್ರಕ್ಕೆ ವಿಧಾನಸಭೆ ವಿಸರ್ಜನೆ ಮಾಡಲಿ ಎನ್ನುವುದು ಸರಿಯಲ್ಲ ಎಂದಿದ್ದಾರೆ. 

 

ರಮೇಶ್ ಜಾರಕಿಹೊಳಿ ಬಿಜೆಪಿ ಸೇರ್ಪಡೆ ವಿಚಾರವಾಗಿಯೂ  ಟ್ವೀಟ್ ಮಾಡಿದ್ದು, ಯಾವೊಬ್ಬ ಕಾಂಗ್ರೆಸ್ ಶಾಸಕನೂ ಪಕ್ಷ ತೊರೆಯುವುದಿಲ್ಲ.  ಒಂದು ವರ್ಷದಿಂದ ಸರ್ಕಾರ ಬೀಳುತ್ತೆ ಎಂದು ಹೇಳುತ್ತಲೇ ಇದ್ದಾರೆ.  ಇನ್ನೂ ನಾಲ್ಕು ವರ್ಷ ಹೀಗೆ ಹೇಳುತ್ತಾರೆ. ಸರ್ಕಾರ ಸುಭದ್ರವಾಗಿರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. 

 

ಜೂನ್ ಒಂದರ ಒಳಗೆ ಸರ್ಕಾರ ರಚನೆ ಮಾಡುತ್ತೇನೆ ಎಂದು ಯಡಿಯೂಪ್ಪ ಹೇಳಿದ್ದು, ಅದು ಸಾಧ್ಯವಾಗದಿದ್ದಲ್ಲಿ ರಾಜಕೀಯ ನಿವೃತ್ತಿ ಪಡೆಯುತ್ತಾರಾ ಎಂದು ಸವಾಲು ಹಾಕಿದರು.