ನವದೆಹಲಿ[ಆ.29]: ಸಚಿವ ಸ್ಥಾನ ತಪ್ಪಿದ್ದಕ್ಕೆ ನೋವಿದೆ. ಮಂಗಳೂರಿನಿಂದ ಬೆಂಗಳೂರಿನ ತನಕ ಬಿಜೆಪಿಯ ಯಾವುದೇ ಶಾಸಕರು ಸಚಿವರಾಗಿಲ್ಲ ಎಂಬ ಬಗ್ಗೆ ಬೇಸರವಿದೆ. ಹಾಗೆಂದು ನಾನು ಪಕ್ಷದ ಬಗ್ಗೆ ಅಸಮಾಧಾನ ಗೊಂಡಿಲ್ಲ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ರಾಮದಾಸ್ ಹೇಳಿದ್ದಾರೆ.

ನಾನು 1994ರಲ್ಲಿ ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದ್ದೆ. ಅಂದು, ಮೈಸೂರಿನ ಮಹಾರಾಜ ಶ್ರೀಕಂಠದತ್ತ ಅವರು ಕೃಷ್ಣರಾಜ ಕ್ಷೇತ್ರದ ಟಿಕೆಟ್ ಕೇಳಿದ್ದರು. ನಾನೂ ಕೂಡ ಅವರಿಗೆ ಟಿಕೆಟ್ ಕೊಟ್ಟು ಬಿಡಿ ಅಂದಿದ್ದೆ. ಆದರೆ, ಆಗ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಎಲ್.ಕೆ.ಅಡ್ವಾಣಿ ಅವರು, ರಾಮದಾಸ್‌ಗೆ ನಾನು ಕ್ಷೇತ್ರದಲ್ಲಿ ಕೆಲಸ ಮಾಡಲು ಹೇಳಿದ್ದೆ. ಅವರು ಕೆಲಸ ಮಾಡಿದ್ದಾರೆ. ಆದ್ದರಿಂದ ರಾಮದಾಸ್‌ಗೆ ಟಿಕೆಟ್ ನೀಡಬೇಕು ಎಂದು ಹೇಳಿ ಟಿಕೆಟ್ ನೀಡಿದ್ದರು ಎಂದಿದ್ದಾರೆ 

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಲ್ಲದೇ ನನಗೆ ಪಕ್ಷದ ಮೇಲೆ ಗೌರವವಿದೆ. ನಾನು ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಬಂದಿದ್ದೇನೆ. ಹೈಕಮಾಂಡ್‌ನ ಯಾರನ್ನೂ ಭೇಟಿಯಾಗಿಲ್ಲ ಎಂದು ಹೇಳಿದರು.