ಎಸ್ಪಿಯ ಪ್ರಮುಖ ನಾಯಕ ಬಿಜೆಪಿಗೆ ?

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 30, Jul 2018, 5:27 PM IST
Amar Singhs presence at PM Modi's event triggers speculation
Highlights

  • ಎಸ್ಪಿಯ ಮಾಜಿ ನಾಯಕ ಅಮರ್ ಸಿಂಗ್ ಬಿಜೆಪಿ ಸೇರ್ಪಡೆ ಸಾಧ್ಯತೆ ?
  • ಕಳೆದ ವರ್ಷ ಹಿರಿಯ ನಾಯಕನನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು.

ನವದೆಹಲಿ[ಜು.30]: ಹಿರಿಯ ರಾಜಕಾರಣಿ ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆಯಿದೆ.

ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಎಲ್ಲರಿಗೂ ಅಚ್ಚರಿ ಮೂಡಿಸಿದರು. ಉತ್ತರ  ಪ್ರದೇಶಕ್ಕೆ ನರೇಂದ್ರ ಮೋದಿ ಸರ್ಕಾರ 81 ಯೋಜನೆಗಳಿಗಾಗಿ 60 ಸಾವಿರ ಕೋಟಿ ರೂ.ಗಳನ್ನು ಹೂಡಿಕೆ ಮಾಡಿದೆ. ಈ ಕಾರ್ಯಕ್ರಮಗಳ ಅನುಷ್ಟಾನಗೊಳಿಸುವ ಬಗ್ಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
   
ಕಳೆದ ವಾರವಷ್ಟೆ ಅಮರ್ ಸಿಂಗ್ ಅವರು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಪ್ರಸ್ತುತ ರಾಜಕೀಯ ಆಗುಹೋಗುಗಳ ಬಗ್ಗೆ ಚರ್ಚಿಸಿದ್ದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎನ್ನಲಾಗಿದೆ. ಹಲವು ವರ್ಷಗಳ ಕಾಲ ಮುಲಾಯಂ ಸಿಂಗ್ ಅವರಿಗೆ ಕಟ್ಟ ನಿಷ್ಠರಾಗಿದ್ದ ಅಮರ್ ಸಿಂಗ್ ರನ್ನು ಕಳೆದ ವರ್ಷ ಪಕ್ಷದಲ್ಲಿನ ಆಂತರಿಕ ಕಾರಣಗಳಿಂದಾಗಿ ಉಚ್ಚಾಟಿಸಲಾಗಿತ್ತು. 

ಎಸ್ಪಿ ಕೂಡ ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿತ್ತು. ಪಕ್ಷದ ಎಲ್ಲ ವಿದ್ಯಾಮಾನಗಳನ್ನು ಅರಿತಿರುವ ಅಮರ್ ಸಿಂಗ್ ಅವರನ್ನು ಬಿಜೆಪಿಗೆ ಸೇರಿಸಿಕೊಂಡರೆ ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷ ಹೆಚ್ಚು ಸ್ಥಾನ ಗೆಲ್ಲಲು ಅನುಕೂಲವಾಗಬಹುದು ಎಂಬ ಲೆಕ್ಕಾಚಾರ ಭಾರತೀಯ ಜನತಾ ಪಕ್ಷದ ನಾಯಕರಲ್ಲಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 80 ಸ್ಥಾನಗಳಲ್ಲಿ 71ರಲ್ಲಿ ವಿಜಯ ಸಾಧಿಸಿತ್ತು. ಎಸ್ಪಿ ಕೇವಲ 5 ಸ್ಥಾನಗಳಲ್ಲಿ ಮಾತ್ರ ಗೆಲುವು ಪಡೆದಿತ್ತು.

loader