ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ಹಿನ್ನೆಲೆ| ಅಧ್ಯಕ್ಷ ಸ್ಥಾನಕ್ಕೆ ಯುವ ನಾಯಕನನ್ನು ನೇಮಿಸಲು ಸಲಹೆ| ಪಂಜಾಬ್ ಸಿಎಂ ಕ್ಯಾ. ಅಮರೀಂದರ್ ಸಿಂಗ್ ಮನವಿ| ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಸಿಂಗ್ ಮನವಿ ಪತ್ರ| ಯುವ ನಾಯಕನೋರ್ವನ್ನು ಅಧ್ಯಕ್ಷರನ್ನಾಗಿ ನೇಮಿಸುವಂತೆ ಒತ್ತಾಯ|

ಪಂಜಾಬ್(ಜು.06): ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿಸಿ ರಕ್ತದ ಯುವ ನಾಯಕನ ಅವಶ್ಯಕತೆ ಇದೆ ಎಂದು ಪಂಜಾಬ್ ಸಿಎಂ ಕ್ಯಾ. ಅಮರೀಂದರ್ ಸಿಂಗ್ ಹೇಳಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿರುವುದು ದುರದೃಷ್ಟಕರ ಎಂದಿರುವ ಸಿಂಗ್, ತೆರವಾದ ಸ್ಥಾನವನ್ನು ಯುವ ನಾಯಕನೋರ್ವ ಅಲಂಕರಿಸಿದರೆ ಒಳಿತು ಎಂದು ಅಭಿಪ್ರಾಯಪಟ್ಟಿದ್ದಾರೆ.

Scroll to load tweet…

ಈ ಕುರಿತು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಮನವಿ ಮಾಡಿರುವ ಒಂಜಾಬ್ ಸಿಎಂ, ಯುವ ಹಾಗೂ ಉತ್ಸಾಹಿ ನಾಯಕನನ್ನು ಪಕ್ಷದ ಅಧ್ಯಕ್ಷನನ್ನಾಗಿ ನೇಮಿಸಿದರೆ ಪಕ್ಷ ಸಂಘಟನೆಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ರಾಹುಲ್ ಅವರಿಂದ ತೆರವಾಗಿರುವ ಸ್ಥಾನಕ್ಕೆ ಮಲ್ಲಿಕಾರ್ಹುನ್ ಖರ್ಗೆ ಅಥವಾ ಸುಶೀಲ್ ಕುಮಾರ್ ಶಿಂಧೆ ಅವರನ್ನು ನೇಮಿಸಲು ಕಾಂಗ್ರೆಸ್ ಚಿಂತಿಸುತ್ತಿದೆ.