ಜೆಡಿಎಸ್ ನಿಂದ ಅಂಬರೀಷ್ ಕಣಕ್ಕೆ ..?

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 29, Jul 2018, 10:05 AM IST
Ambarish to contest Ramanagara By Election from JDS
Highlights

ರೆಬೆಲ್ ಸ್ಟಾರ್ ಅಂಬರೀಷ್ ರಾಮನಗರ ಉಪ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದ್ದು, ಅವರ ವಿರುದ್ಧ ಕಾಂಗ್ರೆಸ್ ನಿಂದ ತಾವೆ ಕಣಕ್ಕೆ ಇಳಿಯುವುದಾಗಿ ವಿಧಾನಪರಿಷತ್ ಸದಸ್ಯ  ಎಂ. ಲಿಂಗಪ್ಪ ತಿಳಿಸಿದ್ದಾರೆ.

ರಾಮನಗರ: ಒಂದೊಮ್ಮೆ ರಾಮನಗರ ಉಪಚುನಾವಣೆಗೆ ಜೆಡಿಎಸ್‌ನಿಂದ ನಟ ಅಂಬರೀಶ್ ಕಣಕ್ಕಿಳಿದರೆ ಅವರ ವಿರುದ್ಧ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ. ಈ ವಿಷಯದಲ್ಲಿ ನಮ್ಮ ಪಕ್ಷದ ವರಿಷ್ಠರು ಅನುಮತಿ ನೀಡದಿದ್ದರೂ ನಾಮಪತ್ರ ಸಲ್ಲಿಸಲು ಸಿದ್ಧ ಎಂದು ವಿಧಾನಪರಿಷತ್ ಸದಸ್ಯ  .ಎಂ. ಲಿಂಗಪ್ಪ ತಿಳಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಗಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಭಾಗಿದಾರರಲ್ಲ. ಈಗಿರುವ ಹೊಂದಾಣಿಕೆ ವ್ಯವಸ್ಥೆ ನಮ್ಮ ಆತ್ಮಕ್ಕೆ ಒಪ್ಪಿಗೆ ಆಗುತ್ತಿಲ್ಲ. ರಾಮನಗರ ಕ್ಷೇತ್ರ ಉಪ ಚುನಾವಣೆಯಲ್ಲಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಇರುವುದಿಲ್ಲ. 

ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಇಕ್ಬಾಲ್ ಹುಸೇನ್ ಅವರನ್ನು ಉಪ ಚುನಾವಣೆಯಲ್ಲಿ ಕಣಕ್ಕಿಳಿಸಲಾಗುವುದು. ಕಾಂಗ್ರೆಸ್ ಅಭ್ಯರ್ಥಿಯಾಗಲು ಮೊದಲ ಆಯ್ಕೆ ಮತ್ತು ಅವಕಾಶ ಅವರಿಗೆ ಮೀಸಲು. ಅವರು ಒಪ್ಪದಿದ್ದರೆ ಪಕ್ಷದಲ್ಲಿ ಚರ್ಚಿಸಿ ಬೇರೊಬ್ಬರಿಗೆ ಅವಕಾಶ ನೀಡಲಾಗುವುದು ಎಂದರು.

loader