ಅಂಬಿಡೆಂಟ್ ಹಗರದ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರು, [ನ.11]: ಅಂಬಿಡೆಂಟ್ ಹಗರದ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇಂದು [ಭಾನುವಾರ] 1ನೇ ಎಸಿಎಂಎಂ ನ್ಯಾಯಧೀಶ ಜಗದೀಶ್ ಅವರು ಇನ್ನಷ್ಟು ಹೆಚ್ಚಿನ ವಿಚಾರಣೆಗೆ ರೆಡ್ಡಿಯನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿದ್ದಾರೆ.

ಆಂಬಿಡೆಂಟ್ & ರೆಡ್ಡಿ: ಸುವರ್ಣನ್ಯೂಸ್‌ನಿಂದ Super Exclusive ವರದಿಗಳ ಸರಮಾಲೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿಯನ್ನು ವಿಚಾರಣೆ ನಡೆಸಿದ್ದ ಸಿಸಿಬಿ ಪೊಲೀಸರು ಹೆಚ್ಚಿನ ತನಿಖೆಗಾಗಿ ರೆಡ್ಡಿಯನ್ನು ಬಂಧಿಸಿದ್ದರು. ಬಳಿಕ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ರೆಡ್ಡಿಯನ್ನು ಕೋರಮಂಗಲದ 1ನೇ ಎಸಿಎಂಎಂ ನ್ಯಾಯಧೀಶ ಜಗದೀಶ್​ ಅವರ ನಿವಾಸಕ್ಕೆ ಕರೆತರಲಾಗಿತ್ತು.

ಇಂದು ಭಾನುವಾರದ ಇರೋದ್ರಿಂದ ನ್ಯಾಯಾಧೀಶರ ಮನೆಗೆ ಕರೆದೊಯ್ಯಲಾಗಿತ್ತು ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರು, ಜನಾರ್ದನ ರೆಡ್ಡಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ನವೆಂಬರ್ 24ರ ವರೆಗೆ ನ್ಯಾಯಾಂಗ ಬಂಧನ ನ್ಯಾಯಾಧೀಶ ಜಗದೀಶದ ಆದೇಶ ಹೊರಡಿಸಿದ್ದಾರೆ.