ಅಮೇಥಿ (ಉತ್ತರ ಪ್ರದೇಶ), [ಮೇ.26]: ಖದೀಮರ ಗುಂಡೇಟಿಗೆ ಬಲಿಯಾದ ಬಿಜೆಪಿ ಕಾರ್ಯಕರ್ತ ಸುರೇಂದ್ರ ಸಿಂಗ್ ಅವರ ಅಂತಿಮ ಯಾತ್ರೆ ಅಮೇಥಿಯ ಬರೌಲಿಯಾ ಗ್ರಾಮದಲ್ಲಿ ನಡೆಯಿತು. 

ಇಂದು [ಭಾನುವಾರ] ಮೃತ ಸುರೇಂದ್ರ ಸಿಂಗ್ ರ ಗ್ರಾಮ ಬರೌಲಿಯಲ್ಲಿ ಅಂತಿಮ ಯಾತ್ರೆ ನಡೆಯಿತು. ಈ ವೇಳೆ ನೂತನ ಸಂಸದೆ ಸ್ಮೃತಿ ಇರಾನಿ ಭಾಗಿಯಾಗಿ, ಸುರೇಂದ್ರ ಸಿಂಗ್ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟರು. 

ಅಮೇಠಿಯಲ್ಲಿ ಸ್ಮೃತಿ ಇರಾನಿ ಪರ ಪ್ರಚಾರ ನಡೆಸಿದ್ದ ಬಿಜೆಪಿ ಕಾರ್ಯಕರ್ತನ ಹತ್ಯೆ!

ನಿನ್ನೆ [ಶನಿವಾರ] ರಾತ್ರಿ ಅಮೇಥಿಯ ಬರೌಲಿಯಾ ಗ್ರಾಮದಲ್ಲಿ ಬಿಜೆಪಿ ಸಂಸದೆ ಸ್ಮೃತಿ ಇರಾನಿ ಆಪ್ತ ಸುರೇಂದ್ರ ಸಿಂಗ್​ ಅವರನ್ನು ಅಪರಿಚಿರು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆ ಬಗ್ಗೆ ಅಮೇಥಿ ಸೇರಿದಂತೆ ಉತ್ತರಪ್ರದೇಶದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಹತ್ಯೆಗೀಡಾದ ಸುರೇಂದ್ರ ಸಿಂಗ್ ಕೊಲೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

ಮತ್ತೊಂದೆಡೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ದೊಡ್ಡ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಜತೆಗೆ 24 ಗಂಟೆಯಲ್ಲಿ ಈ ಬಗ್ಗೆ ವರದಿ ನೀಡುವಂತೆ ಕೂಡ ಸೂಚಿಸಿದ್ದಾರೆ.