2018 ರ ಕರ್ನಾಟಕ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ವಿಚಾರವಾಗಿದೆ. ಉಭಯ ಪಕ್ಷಗಳು ತಂತ್ರ-ರಣತಂತ್ರಗಳನ್ನು ಹೆಣೆಯುವಲ್ಲಿ ಬ್ಯಸಿಯಾಗಿವೆ.  2018 ರ ಚುನಾವಣೆಯನ್ನು ಟಾರ್ಗೆಟ್ ಮಾಡಿರುವ ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರಿಗೆ ಹೊಸ ಸೂಚನೆ ನೀಡಿದ್ದಾರೆ.

ಬೆಂಗಳೂರು (ಸೆ.20): 2018 ರ ಕರ್ನಾಟಕ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ವಿಚಾರವಾಗಿದೆ. ಉಭಯ ಪಕ್ಷಗಳು ತಂತ್ರ-ರಣತಂತ್ರಗಳನ್ನು ಹೆಣೆಯುವಲ್ಲಿ ಬ್ಯಸಿಯಾಗಿವೆ. 2018 ರ ಚುನಾವಣೆಯನ್ನು ಟಾರ್ಗೆಟ್ ಮಾಡಿರುವ ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರಿಗೆ ಹೊಸ ಸೂಚನೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೆಹಲಿಯಲ್ಲೇ ಕುಳಿತು ಕರ್ನಾಟಕ ರಾಜ್ಯ ರಾಜಕಾರಣ ಗುಣಾಕಾರ, ಭಾಗಾಕಾರ ಲೆಕ್ಕ ಹಾಕುತ್ತಿದ್ದಾರೆ ಅಮಿತ್ ಶಾ. ರಾಜ್ಯ ಬಿಜೆಪಿ ನಾಯಕರನ್ನು ಬಡಿದೆಬ್ಬಿಸುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ವಿರುದ್ಧ 100 ಆರೋಪಗಳ ಪಟ್ಟಿ ಬಿಡುಗಡೆ ಮಾಡುವಂತೆ ಬಿಜೆಪಿ ನಾಯಕರಿಗೆ ಸೂಚಿಸಿದ್ದಾರೆ. ಸರ್ಕಾರದ ವಿರುದ್ಧ ಜನಾಂದೋಲನ ಸೃಷ್ಟಿಯಾಗಬೇಕು ಎಂದು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಖಡಕ್ ಸೂಚನೆ ನೀಡಿದ್ದಾರೆ. ಫೆಬ್ರವರಿಯೊಳಗೆ ಸರ್ಕಾರದ ವಿರುದ್ಧದ ಎಲ್ಲಾ ಹೋರಾಟಗಳು ಪೂರ್ಣಗೊಳ್ಳಬೇಕು ಎಂದು ಗಡುವನ್ನೂ ಅಮಿತ್​ ಶಾ ನೀಡಿದ್ದಾರೆ.