ನಾಳೆಯಿಂದ ಮೂರು ದಿನಗಳ ಕಾಲ ಅಮಿತ್ ಶಾ ತಮಿಳುನಾಡಿಗೆ ಪ್ರವಾಸ ಕೈಗೊಳ್ಳಬೇಕಿದ್ದು, ಕೊನೆಕ್ಷಣದಲ್ಲಿ ಪ್ರವಾಸ ರದ್ದಾಗಿದೆ.
ನವದೆಹಲಿ (ಆ.21)): ನಾಳೆಯಿಂದ ಮೂರು ದಿನಗಳ ಕಾಲ ಅಮಿತ್ ಶಾ ತಮಿಳುನಾಡಿಗೆ ಪ್ರವಾಸ ಕೈಗೊಳ್ಳಬೇಕಿದ್ದು, ಕೊನೆಕ್ಷಣದಲ್ಲಿ ಪ್ರವಾಸ ರದ್ದಾಗಿದೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪಕ್ಷ ಜೆಡಿಯು ಎನ್’ಡಿಎ ಪಾಳಯ ಸೇರಲಿದ್ದು, ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಈ ಸಂಬಂಧ ಅಮಿತ್ ಶಾ ಮಂತ್ರಿಗಳ ಜೊತೆ ಸಮಾಲೋಚನೆ ನಡೆಸುವುದರಲ್ಲಿ ಬ್ಯುಸಿಯಾಗಿದ್ದು, ಈ ಕಾರಣದಿಂದ ತಮಿಳುನಾಡು ಪ್ರವಾಸವನ್ನು ಕೊನೆಕ್ಷಣದಲ್ಲಿ ರದ್ದುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂದಿನ ಪ್ರವಾಸದ ದಿನಾಂಕವಿನ್ನೂ ನಿಗದಿಯಾಗಿಲ್ಲ.
