ಸಿಬಿಐ ಅನುಕೂಲ ಮಾಡಿಕೊಟ್ಟ ಕಾರಣ ಅಮಿತ್ ಶಾ ಇಂದು ಹೊರಗಿದ್ದಾರೆ  ಎಂದಿರುವ ಸಿದ್ದರಾಮಯ್ಯ, ಅಮಿತ್​ ಶಾಗೆ ನಮ್ಮ ಸರ್ಕಾರದ ಬಗ್ಗೆ‌ ಮಾತನಾಡುವ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು (ನ.28): ರಾಜ್ಯ ಸರ್ಕಾರದ ವಿರುದ್ಧ ನಿನ್ನೆ ವಾಗ್ದಾಳಿ ನಡೆಸಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಮಿತ್​ ಶಾ ಒಬ್ಬ ಕೊಲೆ ಆರೋಪಿ, ನರೇಂದ್ರ ಮೋದಿ ಪ್ರಧಾನಿ ಆಗದಿರುತ್ತಿದ್ದರೆ ಅಮಿತ್​ ಶಾ ಜೈಲಿನಲ್ಲಿ ಇರಬೇಕಿತ್ತು, ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಿಬಿಐ ಅನುಕೂಲ ಮಾಡಿಕೊಟ್ಟ ಕಾರಣ ಅಮಿತ್ ಶಾ ಇಂದು ಹೊರಗಿದ್ದಾರೆ ಎಂದಿರುವ ಸಿದ್ದರಾಮಯ್ಯ, ಅಮಿತ್​ ಶಾಗೆ ನಮ್ಮ ಸರ್ಕಾರದ ಬಗ್ಗೆ‌ ಮಾತನಾಡುವ ನೈತಿಕತೆ ಇಲ್ಲ ಎಂದು ಹೇಳಿದ್ದಾರೆ.

ಭಾನುವಾರ ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ಏರ್ಪಡಿಸಿದ್ದ ಹಿಂದುಳಿದ ಸಮುದಾಯಗಳ ಏಕತಾ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ್ದ ಅಮಿತ್ ಶಾ, ದೇಶದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ ಕರ್ನಾಟಕ ರಾಜ್ಯದಲ್ಲಿದ್ದು, ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯ ಅಭಿವೃದ್ಧಿ ವಿಚಾರದಲ್ಲಿ ಸಾಕಷ್ಟು ಹಿಂದುಳಿದಿದೆ ಎಂದು ಆರೋಪಿಸಿದ್ದರು.