ನವದೆಹಲಿ(ಜು.27): ಇದೇ ಸೋಮವಾರ(ಜು.29)ದಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸದನದಲ್ಲಿ ಬಹುಮತ ಸಾಬೀತು ಮಾಡಬೇಕಿದ್ದು, ಇಡೀ ದೇಶದ ಚಿತ್ತ ಇದೀಗ ಕರ್ನಾಟಕ ವಿಧಾನಸಭೆಯತ್ತ ನೆಟ್ಟಿದೆ.

ಈ ಮಧ್ಯೆ ಕರ್ನಾಟಕದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸುಭದ್ರ ಹಾಗೂ ಅಭಿವೃದ್ಧಿ ಪರ ಆಡಳಿತ ನೀಡಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಅಮಿತ್ ಶಾ ಭರವಸೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಶಾ, ಯಡಿಯೂರಪ್ಪ ಸರ್ಕಾರ ಕರ್ನಾಟಕದಲ್ಲಿ ಸುಭದ್ರ ಹಾಗೂ ಅಭಿವೃದ್ಧಿ ಪರ ಆಡಳಿತ ನೀಡಲಿದೆ ಎಂದು ದೇಶದ ಜನರಿಗೆ ಭರವಸೆ ನೀಡುವುದಾಗಿ ಹೇಳಿದ್ದಾರೆ.