ನವದೆಹಲಿ: ಭಯೋತ್ಪಾದನೆ ನಿಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ ಎಂಬ ವಿಶ್ಲೇಷಣೆಗಳ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಹೇಳಿ ಇದೀಗ ಸದ್ದು ಮಾಡಿದೆ. 

ಪಾಕಿಸ್ತಾನ ಮತ್ತು ಭಯೋತ್ಪಾದನೆ ವಿರುದ್ಧ ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರು ಕಟುವಾದ ನಿಲುವು ತೆಗೆದುಕೊಂಡಿರಲಿಲ್ಲ ಎಂಬುದನ್ನು ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ದೆಹಲಿ ಕಾಂಗ್ರೆಸ್‌ ಘಟಕದ ಅಧ್ಯಕ್ಷೆ ಶೀಲಾ ದೀಕ್ಷಿತ್‌ ಅವರು ಒಪ್ಪಿಕೊಂಡಿದ್ದಾರೆ.

‘ಮೋದಿ ಹೇ ತೋ ಮುಮ್ಕಿನ್‌ ಹೇ’: ಬಿಜೆಪಿ ಚುನಾವಣಾ ಘೋಷವಾಕ್ಯ

ಸಿಎನ್‌ಎನ್‌-ನ್ಯೂಸ್‌-18 ಸಂದರ್ಶನದಲ್ಲಿ ಮಾತನಾಡಿದ ಶೀಲಾ ದೀಕ್ಷಿತ್‌ ಅವರು, ‘ಪಾಕಿಸ್ತಾನ ಮತ್ತು ಭಯೋತ್ಪಾದನೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರಂತೆ ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರು ಕಠಿಣ ನಿಲುವು ತಾಳಿರಲಿಲ್ಲ,’ ಎಂದರು. ಆದರೆ, ಮೋದಿ ಅವರು ರಾಜಕೀಯ ಲಾಭಕ್ಕಾಗಿ ಇದನ್ನೆಲ್ಲ ಮಾಡಿದ್ದಾರೆ ಎಂದು ಇದೇ ವೇಳೆ ಅವರು ಟೀಕಿಸಿದರು.

ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಕಿತಾಪತಿ, ನೆಟ್ಟಿಗರು ಕೊಟ್ಟ ಹೊಡೆತಕ್ಕೆ ಅಪ್ಪಚ್ಚಿ

ಆದರೆ ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್ ಹೇಳಿಕೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರತಿಕ್ರಿಯಿಸಿದ್ದು, ಥ್ಯಾಂಕ್ಸ್ ಹೇಳಿದ್ದಾರೆ.