ಅಮಿತ್‌ ಶಾ ಅವರು ಮೇ 6 ಮತ್ತು 7ರಂದು ಮೈಸೂರಿನಲ್ಲಿ ನಡೆಯಲಿರುವ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಗೆ ಆಗಮಿಸುವುದಿಲ್ಲ ಎಂದು ಬಿಎಸ್'ವೈ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಪಕ್ಷದ ಸಂಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬರುವ ಆಗಸ್ಟ್ ತಿಂಗಳಲ್ಲಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರೇ ಈ ವಿಷಯ ತಿಳಿಸಿದ್ದಾರೆ.
ಶುಕ್ರವಾರ ಡಾಲರ್ಸ್ ಕಾಲೋನಿ ಯಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಅಮಿತ್ ಶಾ ಅವರು ಮೇ 6 ಮತ್ತು 7ರಂದು ಮೈಸೂರಿನಲ್ಲಿ ನಡೆಯಲಿರುವ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಗೆ ಆಗಮಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಆಗಸ್ಟ್ನಲ್ಲಿ ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಈ ಸಂದರ್ಭ ಸುಮಾರು ಮೂರು ದಿನಗಳ ಕಾಲ ಇಲ್ಲೇ ವಾಸ್ತವ್ಯ ಹೂಡಿ ಪಕ್ಷದ ಸಂಘಟನೆ ಕುರಿತ ಚರ್ಚೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಹೇಳಿದರು.
