ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅಖಿಲೇಶ್ ಯಾದವ್ ವಿರುದ್ಧ ಕಿಡಿ ಕಾರಿದ್ದಾರೆ. ಲಕ್ನೋ ಮೆಟ್ರೋ ಪ್ರಾಜೆಕ್ಟ್ ನಲ್ಲಿ ಭ್ರಷ್ಟಾಚಾರ ನಡೆದಿದ್ದು ಅದರಲ್ಲಿ ಅಖಿಲೇಶ್ ಕೂಡಾ ಭಾಗಿಯಾಗಿದ್ದಾರೆ ಎಂದು ಶಾ ಆರೋಪಿಸಿದ್ದಾರೆ.

ಗೋರಕ್ ಪುರ್ (ಫೆ.18): ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅಖಿಲೇಶ್ ಯಾದವ್ ವಿರುದ್ಧ ಕಿಡಿ ಕಾರಿದ್ದಾರೆ. ಲಕ್ನೋ ಮೆಟ್ರೋ ಪ್ರಾಜೆಕ್ಟ್ ನಲ್ಲಿ ಭ್ರಷ್ಟಾಚಾರ ನಡೆದಿದ್ದು ಅದರಲ್ಲಿ ಅಖಿಲೇಶ್ ಕೂಡಾ ಭಾಗಿಯಾಗಿದ್ದಾರೆ ಎಂದು ಶಾ ಆರೋಪಿಸಿದ್ದಾರೆ.

ಗೋರಕ್ ಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ, ಕಾಂಗ್ರೆಸ್ಸನ್ನು ಮೊದಲಿನಿಂದಲೂ ವಿರೋಧಿಸುತ್ತಿರುವ ಸಮಾಜವಾದಿ ಪಕ್ಷ ಈಗ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದೆ. ಎರಡು ಭ್ರಷ್ಟಾಚಾರ ಪಕ್ಷಗಳ ನಡುವಿನ ಅಪವಿತ್ರ ಮೈತ್ರಿ ಇದಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಪ್ರತಿಯೊಬ್ಬರಿಗೂ ತಮ್ಮ ಕುಟುಂಬದ ಜೊತೆ ಮೆಟ್ರೋದಲ್ಲಿ ಸಂಚರಿಸಬೇಕೆಂಬ ಆಸೆಯಿರುತ್ತದೆ. ಆದರೆ ಅಂತವರು ಬರಿಗೈಲಿ ವಾಪಸ್ಸಾಗಬೇಕಾಗುತ್ತದೆ. ಯಾಕೆಂದರೆ ಮೆಟ್ರೋ ಇನ್ನೂ ಪ್ರಾರಂಭವಾಗಿಲ್ಲವೆಂದು ಶಾ ವ್ಯಂಗ್ಯವಾಡಿದ್ದಾರೆ.