ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮಣಿಪುರದ ಇಬೋಬಿ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ.

ಇಂಫಾಲ್ (ಫೆ.28): ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮಣಿಪುರದ ಇಬೋಬಿ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ.

ಪೂರ್ಣಗೊಳ್ಳದ ಕಾಮಗಾರಿಯನ್ನು ಉದ್ಘಾಟಿಸಲು ಇಬೋಬಿ ಸಿಂಗ್ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯನ್ನು ಆಹ್ವಾನಿಸಿದ್ದರು. ಪ್ರಸ್ತುತ ರಾಜ್ಯ ಸರ್ಕಾರವು ಕೇಂದ್ರದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದೆ. ಕೇಂದ್ರದ ಹಣವನ್ನಷ್ಟೂ ಅವರು ಬಳಸಿಕೊಂಡಿದ್ದಾರೆಂದು ಶಾ ಆರೋಪಿಸಿದ್ದಾರೆ.

ಮಣಿಪುರದಲ್ಲಿ ಮೊದಲ ಹಂತದ ಚುನಾವಣೆ ಮಾರ್ಚ್ 4 ರಂದು ನಡೆಯಲಿದೆ. ಇದಕ್ಕೆ ಎಲ್ಲಾ ಪಕ್ಷಗಳ ಪ್ರಚಾರ ಭರಾಟೆ ಜೋರಾಗಿದೆ.