ಮಂಗಳೂರಿಗೆ ಆಗಮಿಸಿದ ಅಮಿತ್ ಶಾ : ಅನಾರೋಗ್ಯದ ಕಾರಣ ನಾಳೆ ಭಾಷಣ

First Published 19, Feb 2018, 10:31 PM IST
Amith shah arrives Mangaluru
Highlights

ಮಂಗಳೂರಿಗೆ ಆಗಮಿಸಿದ ಅಮಿತ್ ಶಾ : ಅನಾರೋಗ್ಯದ ಕಾರಣ ನಾಳೆ ಭಾಷಣ

ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಪ್ರಚಾರಕ್ಕಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಮಂಗಳೂರಿಗೆ ಆಗಮಿಸಿದರು. ಅಮಿತ್ ಶಾಗೆ ಬಿಜೆಪಿ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದರು. ಕಾರ್ಯಕ್ರಮದ ವೇದಿಕೆಗೆ ಆಗಮಿಸದ  ಅಮಿತ್ ಶಾ ಕೈ ಬೀಸಿ ಕುಕ್ಕೆ ಸುಬ್ರಮಣ್ಯಕ್ಕೆ ತೆರಳಿದರು. ಇನ್ನು ಅಮಿತ್ ಶಾ ಮಾತು ಕೇಳಲು ನೆರೆದಿದ್ದ ಬಿಜೆಪಿ ಕಾರ್ಯಕರ್ತರಿಗೆ ನಿರಾಸೆಯಾಯ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡದ ಅಮಿತ್ ಶಾ ಅವರು ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ಅಲ್ಲಿ ವಾಸ್ತವ್ಯ ಹೂಡಿದ್ದಾರೆ. ಇನ್ನು ನಾಳೆ  ಬಿಜೆಪಿ  ಸಮಾವೇಶದಲ್ಲಿ  ಭಾಗವಹಿಸಲಿದ್ದಾರೆ.

loader