2019ರ ಲೋಕಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ನಡೆಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಈಶಾನ್ಯ ರಾಜ್ಯಗಳ 25 ಸ್ಥಾನಗಳ ಪೈಕಿ 21 ಸ್ಥಾನಗಳನ್ನು ಬಿಜೆಪಿ ಗೆಲ್ಲಲೇಬೇಕು ಎಂದು ಕಾರ್ಯಕರ್ತರಿಗೆ ಟಾರ್ಗೆಟ್‌ ನೀಡಿದ್ದಾರೆ.

ಗುವಾಹಟಿ: 2019ರ ಲೋಕಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ನಡೆಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಈಶಾನ್ಯ ರಾಜ್ಯಗಳ 25 ಸ್ಥಾನಗಳ ಪೈಕಿ 21 ಸ್ಥಾನಗಳನ್ನು ಬಿಜೆಪಿ ಗೆಲ್ಲಲೇಬೇಕು ಎಂದು ಕಾರ್ಯಕರ್ತರಿಗೆ ಟಾರ್ಗೆಟ್‌ ನೀಡಿದ್ದಾರೆ.

ಇಲ್ಲಿನ ಬೂತ್‌ಮಟ್ಟದ ಕಾರ್ಯಕರ್ತರ ರಾರ‍ಯಲಿಯನ್ನುದ್ದೇಶಿಸಿ ಮಾತನಾಡಿದ ಅವರು ಮಿಜೋರಾಂ ಹೊರತುಪಡಿಸಿ ಉಳಿದ ಈಶಾನ್ಯ ರಾಜ್ಯಗಳಲ್ಲಿ ‘ಈಶಾನ್ಯ ಪ್ರಜಾಸತ್ತಾತ್ಮಕ ಬಣ’ ಅಸ್ತಿತ್ವದಲ್ಲಿದೆ.

ಇದು ಬದಲಾಗಬೇಕು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 8 ಸ್ಥಾನವನ್ನು ಪಡೆದಿತ್ತು.ಆದರೆ ಈ ಬಾರಿ ಈಶಾನ್ಯ ರಾಜ್ಯಗಳಿಂದ ಬಿಜೆಪಿ ಗರಿಷ್ಠ ಸ್ಥಾನಗಳನ್ನು ಗೆಲ್ಲಬೇಕು ಎಂದು ಕಾರ್ಯಕರ್ತರಿಗೆ ಕರೆನೀಡಿದರು.