ಈ ಬಗ್ಗೆ ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ. ಸದಾನಂದಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ನವದೆಹಲಿ(ಆ.02): ಇತ್ತೀಚೆಗಷ್ಟೇ ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆ ಪ್ರವೇಶ ಬಯಸಿ ಉಮೇದುವಾರಿಕೆ ಸಲ್ಲಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಫೇಸ್ಬುಕ್ನಲ್ಲಿ 1 ಕೋಟಿ ಲೈಕ್ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ. ಸದಾನಂದಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಸದಾನಂದಗೌಡ, ‘ನೀವು ದೇಶದ 1 ಕೋಟಿ ಸಹೃದಯಿಗಳ ಸಾಮ್ರಾಟ,’ ಎಂದು ಕೊಂಡಾಡಿದ್ದಾರೆ. ಜತೆಗೆ 1 ಕೋಟಿ ಲೈಕ್ಗಳನ್ನು ಸಂಪಾದಿಸಿದ ಶಾ ಅವರಿಗೆ ಅಭಿನಂದನೆ ಎಂದು ಟ್ವೀಟ್ ಮಾಡಿದ್ದಾರೆ.ಫೇಸ್ಬುಕ್ನಲ್ಲಿ ಅತಿ ಹೆಚ್ಚು ಲೈಕ್ ಪಡೆದ ರಾಜಕೀಯ ನಾಯಕರ ಪೈಕಿ ಪ್ರಧಾನಿ ನರೇಂದ್ರ ಮೋದಿ ಅವರ ನಂತರದ ಸ್ಥಾನವನ್ನು ಶಾ ಅಲಂಕರಿಸಿದ್ದಾರೆ.