ಪರಿಶಿಷ್ಟಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ವಿವಾದದ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ಗುರುವಾರ ಕಿಡಿಕಾರಿದ್ದು, ಈ ಸಂಬಂಧ ರಾಹುಲ್‌ ನೀಡಿದರು ಎನ್ನಲಾದ ‘ಸುಳ್ಳು’ ಹೇಳಿಕೆಯೊಂದರ ಬಗ್ಗೆ ವಿಡಿಯೋ ಸಮೇತ ಟ್ವೀಟ್‌ ಮಾಡಿ ತಿರುಗೇಟು ನೀಡಿದ್ದಾರೆ.
ನವದೆಹಲಿ : ಪರಿಶಿಷ್ಟಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ವಿವಾದದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಗುರುವಾರ ಕಿಡಿಕಾರಿದ್ದು, ಈ ಸಂಬಂಧ ರಾಹುಲ್ ನೀಡಿದರು ಎನ್ನಲಾದ ‘ಸುಳ್ಳು’ ಹೇಳಿಕೆಯೊಂದರ ಬಗ್ಗೆ ವಿಡಿಯೋ ಸಮೇತ ಟ್ವೀಟ್ ಮಾಡಿ ತಿರುಗೇಟು ನೀಡಿದ್ದಾರೆ.
ಕರ್ನಾಟಕದಲ್ಲಿ ಜನಾಶೀರ್ವಾದ ಯಾತ್ರೆ ವೇಳೆ ರಾಹುಲ್ ಗಾಂಧಿ ಅವರು, ‘ಒಂದೆಡೆ ದಲಿತರು ಮತ್ತು ಬುಡಕಟ್ಟು ಜನಾಂಗದ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿದ್ದರೆ, ಮತ್ತೊಂದೆಡೆ ಪರಿಶಿಷ್ಟಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ರದ್ದುಗೊಂಡಿದೆ. ಆದರೆ, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ಮುರಿಯುತ್ತಿಲ್ಲ’ ಎಂಬ ಹೇಳುತ್ತಿರುವುದು ಕಂಡುಬರುತ್ತದೆ. ಈ ವಿಡಿಯೋವನ್ನು ಶಾ ತಮ್ಮ ಟ್ವೀಟರ್ ಖಾತೆಯಲ್ಲಿ ಲಗತ್ತಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಶಾ, ‘ಸುಳ್ಳುಗಳ ಮೇಲೆ ಸುಳ್ಳು! ನೋಡಿ. ಸಮಾಜವನ್ನು ಇಬ್ಭಾಗ ಮಾಡಲು ರಾಹುಲ್ ಗಾಂಧಿ ಅವರು ಹೇಗೆ ಎಸ್ಸಿ/ಎಸ್ಟಿಕಾಯ್ದೆಯನ್ನು ಹೇಗೆಲ್ಲ ಬಳಸುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗಷ್ಟೇ ಎಸ್ಸಿ/ಎಸ್ಟಿ ಕಾಯ್ದೆಯನ್ನು ದುರ್ಬಲಗೊಳಿಸಲಿದೆ ಎನ್ನಲಾದ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ರಾಷ್ಟಾ್ರದ್ಯಂತ ಹಲವು ದಲಿತ ಸಂಘಟನೆಗಳು ಪ್ರತಿಭಟನೆ ಕೈಗೊಂಡಿದ್ದವು. ತೀರ್ಪಿನ ವಿರುದ್ಧ ಈಗಾಗಲೇ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
