ರಾಜ್ಯದಲ್ಲಿ ಬರಗಾಲ ಇರುವಾಗ ರಾಜಕೀಯ ಬೇಡ, ಇಂಥ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಅನಂತ್ ಕುಮಾರ್ ಮುಖ್ಯಮಂತ್ರಿಯವರಿಗೆ ಸಲಹೆ ನೀಡಿದ್ದಾರೆ.
ನವದೆಹಲಿ (ನ.29): ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ತಿರುಗೇಟು ನೀಡಿದ್ದಾರೆ.
ಅಮಿತ್ ಶಾಗೆ ಕೋರ್ಟ್ ಕ್ಲೀನ್ ಚಿಟ್ ನೀಡಿದೆ, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಿಳಿದುಕೊಳ್ಳಲಿ ಎಂದು ಅನಂತ್ ಕುಮಾರ್ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಬರಗಾಲ ಇರುವಾಗ ರಾಜಕೀಯ ಬೇಡ, ಇಂಥ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಅನಂತ್ ಕುಮಾರ್ ಮುಖ್ಯಮಂತ್ರಿಯವರಿಗೆ ಸಲಹೆ ನೀಡಿದ್ದಾರೆ.
ಭಾನುವಾರ ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ಏರ್ಪಡಿಸಿದ್ದ ಹಿಂದುಳಿದ ಸಮುದಾಯಗಳ ಏಕತಾ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ್ದ ಅಮಿತ್ ಶಾ, ದೇಶದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ ಕರ್ನಾಟಕ ರಾಜ್ಯದಲ್ಲಿದ್ದು, ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯ ಅಭಿವೃದ್ಧಿ ವಿಚಾರದಲ್ಲಿ ಸಾಕಷ್ಟು ಹಿಂದುಳಿದಿದೆ ಎಂದು ಆರೋಪಿಸಿದ್ದರು.
ಅದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಅಮಿತ್ ಶಾ ಒಬ್ಬ ಕೊಲೆ ಆರೋಪಿ, ನರೇಂದ್ರ ಮೋದಿ ಪ್ರಧಾನಿ ಆಗದಿರುತ್ತಿದ್ದರೆ ಅಮಿತ್ ಶಾ ಜೈಲಿನಲ್ಲಿ ಇರಬೇಕಿತ್ತು, ಅಮಿತ್ ಶಾಗೆ ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಹೇಳಿದ್ದರು.
