ವಿಜಯವಾಡ(ಸೆ.10): ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಕೇಂದ್ರ ಸರಕಾರ ನಿರಾಕರಿಸುವುದನ್ನು ವಿರೋಧಿಸಿ ಬಂದ್‌ಗೆ ಕರೆ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಶಾಖಪಟ್ಟಣ, ವಿಜಯವಾಡ, ಕಡಪ ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಯುತ್ತಿದೆ. YSR ಕಾಂಗ್ರೆಸ್, ಸಿಪಿಐ, ಸಿಪಿಎಂ ಸೇರಿದಂತೆ ಹಲವು ಪಕ್ಷಗಳು ಬಂದ್​ಗೆ ಕರೆ ನೀಡಿವೆ. ವಿಜಯವಾಡದ ಪಂಡಿತ್ ನೆಹರು ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಿ ರಸ್ತೆ ತಡೆ ನಡೆಸಿದ್ರು. ಬಂದ್ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲೀಸ್ ಬಿಗಿ ಬಂದೋ ಬಸ್ತ್ ಏರ್ಪಡಿಸಲಾಗಿದೆ. ಹಲವೆಡೆ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಸ್ ಸಂಚಾರ ಸಹ ಸಂಪೂರ್ಣ ಸ್ಥಗಿತಗೊಂಡಿದೆ.

ಚುನಾವಣೆ ಸಂದರ್ಭದಲ್ಲಿ ಬಿಜೆಪಿ- ಟಿಡಿಪಿ ಮೈತ್ರಿಕೂಟ ಆಂಧ್ರಕ್ಕೆ 5 ವರ್ಷಗಳ ಬದಲಿಗೆ 10 ವರ್ಷಗಳ ಕಾಲ ವಿಶೇಷ ಸ್ಥಾನಮಾನ ನೀಡುವುದಾಗಿ ಆಶ್ವಾಸನೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದು 2 ವರ್ಷಗಳಾದರೂ ಈ ಭರವಸೆ ಈಡೇರಿಲ್ಲ.