ರಾಮನಗರ ಕ್ಷೇತ್ರಕ್ಕೆ ಅನಿತಾ ಕುಮಾರಸ್ವಾಮಿ ಫೈನಲ್ ಅಲ್ಲ?
ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ಎದುರಾಗಿರುವ ರಾಮನಗರ ಕ್ಷೇತ್ರ ಉಪ ಚುನಾವಣೆಯಲ್ಲಿ ಸೊಸೆ ಅನಿತಾ ಕುಮಾರಸ್ವಾಮಿ ಸ್ಪರ್ಧೆಗೆ ಪಕ್ಷವು ಇನ್ನೂ ತೀರ್ಮಾನಿಸಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ಎದುರಾಗಿರುವ ರಾಮನಗರ ಕ್ಷೇತ್ರ ಉಪ ಚುನಾವಣೆಯಲ್ಲಿ ಸೊಸೆ ಅನಿತಾ ಕುಮಾರಸ್ವಾಮಿ ಸ್ಪರ್ಧೆಗೆ ಪಕ್ಷವು ಇನ್ನೂ ತೀರ್ಮಾನಿಸಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, ಉಪ ಚುನಾವಣೆಯನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ. ರಾಮನಗರ ಕ್ಷೇತ್ರವು ನಮ್ಮದೇ ಕ್ಷೇತ್ರವಾಗಿತ್ತು ಅಲ್ಲಿ ಅಭ್ಯರ್ಥಿ ಹಾಕುತ್ತೇವೆ.
ಜಮಖಂಡಿಯಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ದೇವೇಗೌಡ ತಿಳಿಸಿದರು. ಮಂಡ್ಯದ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಹುರಿಯಾಳು ಸ್ಪರ್ಧೆ ಮಾಡಲಿದ್ದಾರೆ. ಅಭ್ಯರ್ಥಿ ನಿರ್ಣಯ ಆಗಿಲ್ಲ ಎಂದರು