ಚನ್ನಪಟ್ಟಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನೀವೆ ಸ್ಪರ್ಧಿಸುವಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಕಾಲಬಂದಾಗ ವರಿಷ್ಠರು ಅದನ್ನು ನಿರ್ಣಯಿಸುತ್ತಾರೆ ಎಂದಷ್ಟೇ ಉತ್ತರಿಸಿದರು.
ರಾಮನಗರ: ಇತ್ತೀಚೆಗೆ ಚನ್ನಪಟ್ಟಣದಲ್ಲಿ ನಡೆದ ಕನಕಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಮತ್ತು ನಾನು ಅಕ್ಕಪಕ್ಕ ಕುಳಿತು ಮಾತನಾಡಿರುವುದಕ್ಕೆ ರಾಜಕೀಯ ಬಣ್ಣ ಬಳಿಯಬೇಡಿ ಎಂದು ಜೆಡಿಎಸ್ ನಾಯಕಿ ಅನಿತಾ ಕುಮಾರ ಸ್ವಾಮಿ ಹೇಳಿದ್ದಾರೆ.
ಸೋಮವಾರ ಪಟ್ಟಣದ ಚಲುವರಾಯಸ್ವಾಮಿ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಶಿವಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂಬ ಮಾಹಿತಿ ನನಗಿರಲಿಲ್ಲ. ವೇದಿಕೆಯಲ್ಲಿ ಅಕ್ಕಪಕ್ಕ ಕುಳಿತಿದ್ದಾಗ, ನಾವು ಯಾವುದೇ ರಾಜಕೀಯವನ್ನು ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಚನ್ನಪಟ್ಟಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನೀವೆ ಸ್ಪರ್ಧಿಸುವಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಕಾಲಬಂದಾಗ ವರಿಷ್ಠರು ಅದನ್ನು ನಿರ್ಣಯಿಸುತ್ತಾರೆ ಎಂದಷ್ಟೇ ಉತ್ತರಿಸಿದರು.
