ಪುನೀತ್‌ ರಾಜ್‌ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ನ್ಯಾಯಾಲಯ ತಡೆ ನೀಡಿದ್ದರೂ ವಿವಾದಿತ ಸಂಭಾಷಣೆಯುಳ್ಳ ದೃಶ್ಯಕ್ಕೆ ಕತ್ತರಿ ಹಾಕದೆ ಪ್ರದರ್ಶನ ಮುಂದುವರಿಸಿರುವುದರ ವಿರುದ್ಧ ಮಂಗಳವಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ವಕೀಲ ನಾರಾಯಣಸ್ವಾಮಿ  ಹೇಳಿದ್ದಾರೆ.

ಬೆಂಗಳೂರು(ಡಿ.26): ಪುನೀತ್‌ ರಾಜ್‌ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ನ್ಯಾಯಾಲಯ ತಡೆ ನೀಡಿದ್ದರೂ ವಿವಾದಿತ ಸಂಭಾಷಣೆಯುಳ್ಳ ದೃಶ್ಯಕ್ಕೆ ಕತ್ತರಿ ಹಾಕದೆ ಪ್ರದರ್ಶನ ಮುಂದುವರಿಸಿರುವುದರ ವಿರುದ್ಧ ಮಂಗಳವಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ವಕೀಲ ನಾರಾಯಣಸ್ವಾಮಿ ಹೇಳಿದ್ದಾರೆ.

ಚಿತ್ರ ತಂಡ ಮನೋರಂಜನೆ ಹೆಸರಿನಲ್ಲಿ ವಕೀಲರ ಭಾವನೆಗಳಿಗೆ ಧಕ್ಕೆಯುಂಟು ಮಾಡಿದೆ. ಅದೇ ಕಾರಣದಿಂದ ನ್ಯಾಯಾಲಯ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿ ಆದೇಶಿಸಿದೆ. ಆದರೆ, ಚಿತ್ರ ತಂಡ ನ್ಯಾಯಾಂಗ ಆದೇಶವನ್ನು ಉಲ್ಲಂಘಿಸಿ ಚಿತ್ರ ಪ್ರದರ್ಶನ ಮಾಡುತ್ತಿದೆ.

ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದು ಅವರು ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ. ಚಿತ್ರ ಪ್ರದರ್ಶನಕ್ಕೆ ತಡೆ ನೀಡಿರುವು ಆದೇಶದ ಪ್ರತಿಯನ್ನು ನಿರ್ಮಾಪಕ, ನಿರ್ದೇಶಕರಿಗೆ ಶನಿವಾರ ಸಂಜೆಯೇ ರವಾನಿಸಲಾಗಿದೆ.

ಇಷ್ಟಾದರೂ ಭಾನುವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಚಿತ್ರ ಪ್ರದರ್ಶನ ಕಂಡಿದೆ. ಇದು ನ್ಯಾಯಾಂಗ ವ್ಯವಸ್ಥೆಗೆ ಮಾಡಿರುವ ಅವಮಾನವಾಗಿದೆ ಎಂದು ಅವರು ಆರೋಪಿಸಿದರು.