ಅನ್ನಭಾಗ್ಯ ಯೋಜನೆಯಿಂದಾಗಿ ರಾಜ್ಯ ಸರ್ಕಾರದ ಮೇಲೆ ಜನರಿಗೆ ಅಲ್ವಸ್ವಲ್ಪ ವಿಶ್ವಾಸವಿದೆ.
ಬೈಂದೂರು(ಮೇ.14): ಅನ್ನಭಾಗ್ಯ ಯೋಜನೆಯಿಂದಾಗಿ ರಾಜ್ಯದ ಸರ್ಕಾರದ ಮೇಲೆ ಜನರಿಗೆ ಅಲ್ಪಸ್ವಲ್ಪ ವಿಶ್ವಾಸವಿದೆ. ಆದರೆ ಈ ಯೋಜನೆ ಕೇಂದ್ರ ಸರ್ಕಾರದ್ದು ಎನ್ನುವುದನ್ನು ಜನರಿಗೆ ತಿಳಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಉಡುಪಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ, ಅನ್ನಭಾಗ್ಯ ಯೋಜನೆಯಿಂದಾಗಿ ರಾಜ್ಯ ಸರ್ಕಾರದ ಮೇಲೆ ಜನರಿಗೆ ಅಲ್ವಸ್ವಲ್ಪ ವಿಶ್ವಾಸವಿದೆ. ಆದರೆ ಈ ಯೋಜನೆಗೆ ಅಗತ್ಯವಿರುವ ಅಕ್ಕಿ ಮತ್ತು ಗೋಧಿಯನ್ನು ಕೇಂದ್ರ ಸರ್ಕಾರ ಕೇವಲ ರೂ.3 ಬೆಲೆಗೆ ರಾಜ್ಯಕ್ಕೆ ನೀಡುತ್ತಿದೆ. ಆದ್ದರಿಂದ ಇದು ಕೇಂದ್ರ ಸರ್ಕಾರದ ಯೋಜನೆಯೇ ಹೊರತು ರಾಜ್ಯದ್ದಲ್ಲ ಎಂದು ಹೇಳಿದರು.
