ರವಿ ಬೆಳಗೆರೆ ಅವರ ಕಚೇರಿಯಲ್ಲಿ  ಜಿಂಕೆ ಚರ್ಮ ಮತ್ತು ಆಮೆ ಚಿಪ್ಪು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಅಧಿಕಾರಿಗಳು ರವಿ ಬೆಳಗೆರೆ ಅವರ ವಿರುದ್ಧ ಎಫ್ಐಆರ್ ದಾಖಲು  ಮಾಡಿದ್ದಾರೆ.

ಬೆಂಗಳೂರು(ಡಿ.10): ಸದ್ಯ ಸುಪಾರಿ ನೀಡಿದ ಪ್ರಕರಣದಲ್ಲಿ ಸಿಸಿಬಿ ವಶದಲ್ಲಿರುವ ಪತ್ರಕರ್ತ ರವಿ ಬೆಳಗೆರೆ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ರವಿ ಬೆಳಗೆರೆ ಅವರ ಕಚೇರಿಯಲ್ಲಿ ಜಿಂಕೆ ಚರ್ಮ ಮತ್ತು ಆಮೆ ಚಿಪ್ಪು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಅಧಿಕಾರಿಗಳು ರವಿ ಬೆಳಗೆರೆ ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ.

ರವಿ ಬೆಳಗೆರೆ ಅವರ ಕಚೇರಿಯಲ್ಲಿ ಸಿಸಿಬಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಜಿಂಕೆ ಚರ್ಮ ಮತ್ತು ಆಮೆ ಚಿಪ್ಪುಗಳು ಪತ್ತೆಯಾಗಿದ್ದವು. ಇವುಗಳನ್ನು ವಶಕ್ಕೆ ಪಡೆದುಕೊಂಡ ಸಿಸಿಬಿ ಅಧಿಕಾರಿಗಳು ಇದಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳಿಗೆ ಪತ್ರ ಬರೆದು ತಿಳಿಸಿದ್ದರು. ಈ ಸಂಬಂಧ ಇದೀಗ ರವಿ ಬೆಳಗೆರೆ ಅವರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು ಮಾಡಲಾಗಿದೆ.