ಹನಿಟ್ರ್ಯಾಪ್‌: ಜಬಲ್ಪುರದಲ್ಲೊಬ್ಬ ಸೇನಾಧಿಕಾರಿ ವಶಕ್ಕೆ

First Published 15, Feb 2018, 8:52 AM IST
Another Honey Trap Army man Detained
Highlights

ಭಾರತೀಯ ವಾಯುಪಡೆಯ ಹಿರಿಯ ಅಧಿಕಾರಿಯೊಬ್ಬರು ಪಾಕಿಸ್ತಾನಗ ಗುಪ್ತಚರ ಸಂಸ್ಥೆ ಐಎಸ್‌ಐ ಹಣೆದ ಹನಿಟ್ರ್ಯಾಪ್‌ ಜಾಲಕ್ಕೆ ಸಿಕ್ಕಿಬಿದ್ದಿದ್ದು ಬೆಳಕಿಗೆ ಬಂದ ಬೆನ್ನಲ್ಲೇ, ಸೇನಾಧಿಕಾರಿಯೊಬ್ಬರು ಇದೇ ರೀತಿಯ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ.

ಜಬಲ್ಪುರ: ಭಾರತೀಯ ವಾಯುಪಡೆಯ ಹಿರಿಯ ಅಧಿಕಾರಿಯೊಬ್ಬರು ಪಾಕಿಸ್ತಾನಗ ಗುಪ್ತಚರ ಸಂಸ್ಥೆ ಐಎಸ್‌ಐ ಹಣೆದ ಹನಿಟ್ರ್ಯಾಪ್‌ ಜಾಲಕ್ಕೆ ಸಿಕ್ಕಿಬಿದ್ದಿದ್ದು ಬೆಳಕಿಗೆ ಬಂದ ಬೆನ್ನಲ್ಲೇ, ಸೇನಾಧಿಕಾರಿಯೊಬ್ಬರು ಇದೇ ರೀತಿಯ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ.

ಮಧ್ಯಪ್ರದೇಶದ ಜಬಲ್ಪುರದಲ್ಲಿ ಲೆಫ್ಟಿನೆಂಟ್‌ ಕರ್ನಲ್‌ ದರ್ಜೆಯ ಅಧಿಕಾರಿಯೊಬ್ಬರನ್ನು ಸೇನೆಯ ಗುಪ್ತಚರ ವಿಭಾಗ ವಶಕ್ಕೆ ಪಡೆದುಕೊಂಡಿದ್ದು, ಅಧಿಕಾರಿಯ ಹೆಸರು ಬಹಿರಂಗ ಪಡಿಸಲಾಗಿಲ್ಲ. ಸೇನೆಯ ಅತ್ಯಂತ ಗೌಪ್ಯ ಮಾಹಿತಿಯನ್ನು ಅವರು ಪಾಕಿಸ್ತಾನಕ್ಕೆ ವರ್ಗಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿ ಅಧಿಕಾರಿ ಪಾಕಿಸ್ತಾನದ ಐಎಸ್‌ಐ ಗೂಢಾಚಾರಿಣಿಯೊಬ್ಬಳ ಪ್ರೇಮಪಾಶಕ್ಕೆ ಸಿಲುಕಿ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಅಧಿಕಾರಿಯ ಬ್ಯಾಂಕ್‌ ಖಾತೆಗೆ ಭಾರೀ ಮೊತ್ತದ ಹಣ ಜಮಾವಣೆಯಾಗಿದೆ ಎಂದೂ ಹೇಳಲಾಗಿದೆ. ಆದರೆ ಈ ಬಗ್ಗೆ ಸೇನೆಯಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

loader