Asianet Suvarna News Asianet Suvarna News

ದಕ್ಷಿಣ ಕನ್ನಡ: ಮತ್ತೊಬ್ಬ ಯುವಕನ ಮೇಲೆ ಹಲ್ಲೆ

ಹಲ್ಲೆಗೊಳಗಾದ ವ್ಯಕ್ತಿಯನ್ನು ಚಿರಂಜೀವಿ(24) ಎಂದು ಗುರುತಿಸಲಾಗಿದ್ದು ಸಮೀಪದ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Another Men attacked by Perpetrators at Mangaluru
  • Facebook
  • Twitter
  • Whatsapp

ಮಂಗಳೂರು(ಜು.08): ಶರತ್ ಮಡಿವಾಳ ಅಂತಿಮ ಸಂಸ್ಕಾರ ನಡೆದು ಕೆಲವೇ ಗಂಟೆಗಳಲ್ಲಿ ಮತ್ತೊಬ್ಬ ಯುವಕನ ಮೇಲೆ ಹಲ್ಲೆಯಾಗಿದೆ. ಮಂಗಳೂರು ಹೊರ ವಲಯದ ಕುತ್ತಾರು ರಾಣಿಪುರದಲ್ಲಿ ಬೈಕಿನಲ್ಲಿ ಚಲಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಮತ್ತೊಂದು ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ನಡೆಸಿದ್ದಾರೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಚಿರಂಜೀವಿ(24) ಎಂದು ಗುರುತಿಸಲಾಗಿದ್ದು ಸಮೀಪದ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 4ರಂದು  ದುಷ್ಕರ್ಮಿಗಳಿಂದ ಹಲ್ಲೆಗೆ ಒಳಗಾಗಿದ್ದ ಶರತ್ ಮಡಿವಾಳ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಸಾವನ್ನಪ್ಪಿದ್ದರು. ಇಂದು ಮಧ್ಯಾಹ್ನ ಸ್ವಗ್ರಾಮ ಸಜಿಪದಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗಿತ್ತು.

Follow Us:
Download App:
  • android
  • ios