ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು, ನಾಯಕರ ಮೇಲಿನ ಹಲ್ಲೆಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ 18 ವರ್ಷದ ಬಿಜೆಪಿ ನಾಯಕ ತ್ರಿಲೋಚನ್ ಮಹೊಟೊಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೀಗ ಮತ್ತೋರ್ವ ಬಿಜೆಪಿ ನಾಯಕನ ಮೃತದೇಹ ಪತ್ತೆಯಾಗಿದೆ.
ಕೋಲ್ಕತ್ತಾ(ಜೂ.2): ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು, ನಾಯಕರ ಮೇಲಿನ ಹಲ್ಲೆಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ 18 ವರ್ಷದ ಬಿಜೆಪಿ ನಾಯಕ ತ್ರಿಲೋಚನ್ ಮಹೊಟೊಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೀಗ ಮತ್ತೋರ್ವ ಬಿಜೆಪಿ ನಾಯಕನ ಮೃತದೇಹ ಪತ್ತೆಯಾಗಿದೆ.
ಬಲರಾಮಪುರದ ದೇವ ಗ್ರಾಮದ ನಿವಾಸಿ 30 ವರ್ಷದ ಬಿಜೆಪಿ ಕಾರ್ಯಕರ್ತ ದುಲಾಲ್ ಕುಮಾರ್ ಅವರ ಮೃತದೇಹ ಹೈ ಟೆನ್ಷನ್ ಟವರ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕಳೆದ ರಾತ್ರಿ ದುಲಾಲ್ ಸ್ವಲ್ಪ ಕೆಲಸವಿರುವುದಾಗಿ ಹೇಳಿ ಹೊರಗೆ ಹೋಗಿದ್ದರು. ಆದರೆ ರಾತ್ರಿ ಮನೆಗೆ ದುಲಾಲ್ ಹಿಂದಿರುಗಿರಲಿಲ್ಲ. ಇದರಿಂದ ಆತಂಕಕ್ಕೆ ಸಿಲುಕ್ಕಿದ್ದ ಸಹೋದರ ದುಲಾಲ್ ಮೊಬೈಲ್ ಗೆ ಸತತವಾಗಿ ಕರೆ ಮಾಡುತ್ತಿದ್ದರು. ಆದರೆ ಬೆಳಗ್ಗೆ ಎದ್ದು ನೋಡಿದಾಗ ಆತನ ಮೃತದೇಹ ಪತ್ತೆಯಾಗಿದ್ದು ಆತನ ಬೈಕ್ ಹಳ್ಳವೊಂದರಲ್ಲಿ ಹತ್ತೆಯಾಗಿದೆ.
ಪಶ್ಚಿಮ ಬಂಗಾಳದಲ್ಲಿ ಸರಣಿ ಕೊಲೆಗಳಾಗುತ್ತಿರುವುದಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಇನ್ನು ಈ ಪ್ರಕರಣ ಸಂಬಂಧ ಸಿಐಡಿ ತನಿಖೆಯನ್ನು ನಡೆಸುತ್ತಿದೆ.
