Asianet Suvarna News Asianet Suvarna News

ಚುನಾವಣೆ ಸಮಯದಲ್ಲೇ ಹೆಚ್'ಡಿಕೆ, ಬಿಎಸ್'ವೈ'ಗೆ ಬಿಗ್ ಶಾಕ್

ಬಿಎಸ್​ವೈ ಮುಖ್ಯ ಮಂತ್ರಿ ಆಗಿದ್ದಾಗ ಕುಮಾರಸ್ವಾಮಿ ಸಂಬಂಧಿಗೆ 51 ಗುಂಟೆ ಭೂಮಿಯನ್ನು ಡಿನೋಟಿಫೈ ಮಾಡಲಾಗಿತ್ತು. ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ 2015ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.

Another Shock For BSY and HDK

ಎಲೆಕ್ಷನ್​ ಹೊತ್ತಲ್ಲಿ  ಯಡಿಯೂರಪ್ಪ ಮತ್ತು ಕುಮಾರಸ್ವಾಮಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. 2015ರಲ್ಲಿ ಗಂಗೇನಹಳ್ಳಿ ಡಿನೋಟಿಫಿಕೇಶನ್ ಸಂಬಂಧ ಲೋಕಾಯುಕ್ತದಲ್ಲಿ ದಾಖಲಾದ ಪ್ರಕರಣಕ್ಕೆ ಮರುಜೀವ ಬಂದಿದೆ. ಈ ಪ್ರಕರಣ ನಡೆದು 3 ವರ್ಷವಾದ್ರೂ ತಪ್ಪಿತಸ್ಥರ ವಿರುದ್ಧ ಇನ್ನೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ್  ಆಕ್ಷೇಪಣೆ ಸಲ್ಲಿಸಿದ್ದಾರೆ.

ಬಿಎಸ್​ವೈ ಮುಖ್ಯ ಮಂತ್ರಿ ಆಗಿದ್ದಾಗ ಕುಮಾರಸ್ವಾಮಿ ಸಂಬಂಧಿಗೆ 51 ಗುಂಟೆ ಭೂಮಿಯನ್ನು ಡಿನೋಟಿಫೈ ಮಾಡಲಾಗಿತ್ತು. ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ 2015ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಕಳೆದ 2 ವರ್ಷಗಳಿಂದ ಲೋಕಾಯುಕ್ತ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿಲ್ಲ. ಜೊತೆಗೆ ಪ್ರಕರಣದ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಆರ್ಜಿ ವಿಚಾರಣೆ ಕೂಡ ಪೆಂಡಿಗ್​ ಇದೆ. ತನಿಖೆ ಮರುಪರಿಶೀಲನೆ ಆಗಬೇಕು ಅಂತಾ ತನಿಖಾಧಿಕಾರಿಗೆ ಜಯಕುಮಾರ್ ಮನವಿ ಮಾಡಿದ್ದಾರೆ.

Follow Us:
Download App:
  • android
  • ios