ಬಿಜೆಪಿಯಿಂದ ಖೋಟಾನೋಟು ಚಲಾವಣೆ

First Published 17, Jun 2018, 7:25 AM IST
Ansari accuses BJP of circulating fake note
Highlights

ಗಂಗಾವತಿ ನಗರದಲ್ಲಿ ಬಿಜೆಪಿ ಮುಖಂಡರೇ ವಿಧಾನ ಸಭೆ ಚುನಾವಣೆಯಲ್ಲಿ ಖೋಟಾನೋಟು ಚಲಾವಣೆ ಮಾಡಿದ್ದಾರೆಂದು ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ಗಂಭೀರವಾಗಿ ಆರೋಪಿಸಿದ್ದಾರೆ. 
 

ಗಂಗಾವತಿ: ಗಂಗಾವತಿ ನಗರದಲ್ಲಿ ಬಿಜೆಪಿ ಮುಖಂಡರೇ ವಿಧಾನ ಸಭೆ ಚುನಾವಣೆಯಲ್ಲಿ ಖೋಟಾನೋಟು ಚಲಾವಣೆ ಮಾಡಿದ್ದಾರೆಂದು ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ಗಂಭೀರವಾಗಿ ಆರೋಪಿಸಿದ್ದಾರೆ. 

ಶನಿವಾರ ನಗರದ ಈದ್ಗಾ ಮೈದಾನದಲ್ಲಿ ರಂಜಾನ್‌ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. 2014ರಲ್ಲಿ ಶಾಸಕ ಪರಣ್ಣ ಮುನವಳ್ಳಿ ಅವರಿಗೆ ವ್ಯಕ್ತಿಯೊಬ್ಬರು ಧಮ್ಮಿ ಹಾಕಿದ್ದರು. 

ಈಗಲೂ ಸಹ ಧಮ್ಮಿ ಹಾಕಿದ್ದಲ್ಲದೆ ಕರೆ ಮಾಡಿ ಖೋಟಾನೋಟಿನ ವ್ಯವಹಾರದ ಬಗ್ಗೆ ಮಾತನಾಡಿದ್ದಾರೆ. ಸಂಭಾಷಣೆಯಲ್ಲಿ ಓರಿಜಿನಲ್‌-ಡುಪ್ಲಿಕೆಟ್‌ ಎಂಬ ಪದಗಳನ್ನು ಬಳಿಸಿದ್ದಾರೆ. ಹೀಗಾಗಿ ಖೋಟಾನೋಟಿನ ವ್ಯವಹಾರ ನಡೆದಿದೆ ಎಂಬ ಅನುಮಾನ ಮೂಡಿದ್ದು ಪೊಲೀಸರು ಸಮಗ್ರ ತನಿಖೆ ನಡೆಸಿದರೆ ಸತ್ಯಾಸತ್ಯತೆ ಹೊರಬರಲಿದೆ ಎಂದರು.

loader