ಮೌಢ್ಯ ನಿಷೇಧ ಕಾಯ್ದೆಗೆ ಕಡೆಗೂ ಮುಕ್ತಿ ಸಿಗುವ ಕಾಲ ಬಂದಿದೆ. ಮುಂದಿನ ಅಧಿವೇಶನದಲ್ಲಿ ಮೌಢ್ಯ ನಿಷೇಧ ಕಾಯ್ದೆಯನ್ನು ಅಂಗೀಕರಿಸೋದಾಗಿ ಕಾನೂನು ಸಚಿವ ಟಿ.ಬಿ. ಜಯಚಂದ್ರ ಹೇಳುವುದರೊಂದಿಗೆ ರಾಜ್ಯದಲ್ಲಿ ಮೌಢ್ಯ ನಿಷೇಧ ಕಾಯ್ದೆ ಜಾರಿಯಾಗೋದು ಗ್ಯಾರಂಟಿ ಆಗಿದೆ.
ಬೆಂಗಳೂರು(ಸೆ.26): ಮೌಢ್ಯ ನಿಷೇಧ ಕಾಯ್ದೆಗೆ ಕಡೆಗೂ ಮುಕ್ತಿ ಸಿಗುವ ಕಾಲ ಬಂದಿದೆ. ಮುಂದಿನ ಅಧಿವೇಶನದಲ್ಲಿ ಮೌಢ್ಯ ನಿಷೇಧ ಕಾಯ್ದೆಯನ್ನು ಅಂಗೀಕರಿಸೋದಾಗಿ ಕಾನೂನು ಸಚಿವ ಟಿ.ಬಿ. ಜಯಚಂದ್ರ ಹೇಳುವುದರೊಂದಿಗೆ ರಾಜ್ಯದಲ್ಲಿ ಮೌಢ್ಯ ನಿಷೇಧ ಕಾಯ್ದೆ ಜಾರಿಯಾಗೋದು ಗ್ಯಾರಂಟಿ ಆಗಿದೆ.
ಬೆಂಗಳೂರಿನ ವಿಧಾನಸೌಧದಲ್ಲಿ ನಿನ್ನೆ ಸುದ್ದಿಗೋಷ್ಠಿ ನಡೆಸಿದ ಕಾನೂನು ಸಚಿವ ಜಯಚಂದ್ರ, ಮಹಾರಾಷ್ಟ್ರ ಮಾದರಿಯ ಮೌಢ್ಯ ನಿಷೇಧ ಕಾಯ್ದೆಗೆ ಪರಿಶೀಲನಾ ಸಮಿತಿ ಅಂತಿಮ ಮುದ್ರೆ ಒತ್ತಿ ಸಚಿವ ಸಂಪುಟಕ್ಕೆ ಕಳಿಸಿದೆ. ಸಚಿವ ಸಂಪುಟ ಅನುಮೋದಿಸಿದ ನಂತರ ಮುಂದಿನ ಅಧಿವೇಶನದಲ್ಲಿ ಮೌಢ್ಯ ನಿಷೇಧ ಕಾಯ್ದೆ ಜಾರಿ ಆಗಲಿದೆ ಅಂತಾ ಸ್ಪಷ್ಟಪಡಿಸಿದ್ರು.
