ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ನ್ಯಾಯಾಂಗ ನಿಂದನೆಗಾಗಿ ಸುಪ್ರೀಂಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ್ದಾರೆ.

ನವದೆಹಲಿ (ಮಾ.06): ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ನ್ಯಾಯಾಂಗ ನಿಂದನೆಗಾಗಿ ಸುಪ್ರೀಂಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅನುರಾಗ್ ಠಾಕೂರ್ ಹಾಗೂ ಬಿಸಿಸಿಐ ಅಧಿಕಾರಿಗಳು ಏಪ್ರಿಲ್ 17 ರಂದು ನಡೆದ ನ್ಯಾಯಾಂಗ ವಿಚಾರಣೆಗೆ ಗೈರು ಹಾಜರಾಗಿರುವುದಕ್ಕಾಗಿ ಸುಪ್ರೀಂಕೋರ್ಟ್ ಅನುರಾಗ್ ಠಾಕೂರ್ ವಿರುದ್ಧ ನ್ಯಾಯಾಂಗ ನಿಂದನಾ ವಿಚಾರಣೆಯನ್ನು ನಡೆಸುತ್ತಿದೆ.

ಅದೇ ರೀತಿ ಇನ್ನೊಂದು ಪ್ರಕರಣದಲ್ಲಿ ಸುಳ್ಳು ಆರೋಪ ಎದುರಿಸುತ್ತಿರುವ ಅನುರಾಗ್ ಠಾಕೂರ್, ಸುಪ್ರೀಂಕೋರ್ಟ್ ನೋಟಿಸ್ ಅನ್ವಯ ಅದಕ್ಕೂ ಬೇಷರತ್ ಕ್ಷಮೆಯಾಚಿಸಿದ್ದಾರೆ.