ಕೇಂದ್ರ ಸರ್ಕಾರದ ನೋಟು ಅಮಾನ್ಯ ಕ್ರಮವು ಮುಂದಿನ ದಿನಗಳಲ್ಲಿ ಪ್ರಯೋಜನಕಾರಿಯಾಗಿದೆ ಎಂದು ಹೇಳಿರುವ ನಾಯ್ಡು, ಮೊಬೈಲ್ ಕರೆನ್ಸಿ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಹಾಗೂ ರೂಪಾಯ್ ಕಾರ್ಡ್’ಗಳನ್ನು ಪರಿಣಾಮಕಾರಿಯಾಗಿ ಬಳಸುವಂತೆ ಕರೆಯಿತ್ತಿದ್ದಾರೆ.

ಹೈದರಾಬಾದ್ (ನ.26): ನೋಟು ಅಮಾನ್ಯ ಕ್ರಮದ ಬಳಿಕ ಜನರು ಎದುರಿಸುತ್ತಿರುವ ಸಮಸ್ಯೆಯನ್ನು ನಿಭಾಯಿಸಲು ಹಾಗೂ ನಗದು-ರಹಿತ ವಹಿವಾಟನ್ನು ಪ್ರೋತ್ಸಾಹಿಸಲು ಆಂಧ್ರ ಪ್ರದೇಶ ಸರ್ಕಾರ, ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತ ಮೊಬೈಲ್ ಫೋನ್’ಗಳನ್ನು ಹಂಚುವ ಬಗ್ಗೆ ಚಿಂತನೆ ನಡೆಸಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೇಂದ್ರ ಸರ್ಕಾರದ ನೋಟು ಅಮಾನ್ಯ ಕ್ರಮವು ಮುಂದಿನ ದಿನಗಳಲ್ಲಿ ಪ್ರಯೋಜನಕಾರಿಯಾಗಿದೆ ಎಂದು ಹೇಳಿರುವ ನಾಯ್ಡು, ಮೊಬೈಲ್ ಕರೆನ್ಸಿ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಹಾಗೂ ರೂಪಾಯ್ ಕಾರ್ಡ್’ಗಳನ್ನು ಪರಿಣಾಮಕಾರಿಯಾಗಿ ಬಳಸುವಂತೆ ಕರೆಯಿತ್ತಿದ್ದಾರೆ.

ಆಂಧ್ರ ಪ್ರದೇಶ ಸರ್ಕಾರವು ‘ಏಪಿ ಪರ್ಸ್’ ಎಂಬ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದೆ. ಆಂಧ್ರ ಪ್ರದೇಶವನ್ನು ದೇಶದ ಮೊದಲ ನಗದು-ರಹಿತ ವ್ಯವಹಾರ ನಡೆಸುವ ರಾಜ್ಯವನ್ನಾಗಿ ಮಾಡಲು ಸಹಕಾರಿಯಾಗಲಿದೆ ಎಂದು ಆಂಧ್ರ ಸರ್ಕಾರದ ಪ್ರಕಟಣೆ ತಿಳಿಸಿದೆ.