ಮಂಜುನಾಥ್ 15 ವರ್ಷಗಳಿಂದ ರಾಜಕೀಯದಲ್ಲಿದ್ದು, ತಾಪಂ ಸದಸ್ಯರಾಗಿ, ಉಪಾಧ್ಯಕ್ಷರಾಗಿ ನಂತರ ಎಪಿಎಂಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಚನ್ನರಾಯಪಟ್ಟಣ(ಫೆ.5): ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ)ಗೆ ನೂತನವಾಗಿ ಆಯ್ಕೆಯಾದ ವಿ.ಎನ್ ಮಂಜುನಾಥ್ ಬೆಂಗಳೂರಿನ ಪಬ್‌ವೊಂದರಲ್ಲಿ ಯುವತಿ ಜೊತೆ ಡ್ಯಾನ್ಸ್ ಮಾಡಿದ್ದಾರೆನ್ನಲಾಗುವ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದು, ಭಾರೀ ಟೀಕೆಗೆ ಗುರಿಯಾಗಿದೆ.
ಮಂಜುನಾಥ್ 15 ವರ್ಷಗಳಿಂದ ರಾಜಕೀಯದಲ್ಲಿದ್ದು, ತಾಪಂ ಸದಸ್ಯರಾಗಿ, ಉಪಾಧ್ಯಕ್ಷರಾಗಿ ನಂತರ ಎಪಿಎಂಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು ಪಬ್‌ನಲ್ಲಿ ಪಾನಮತ್ತರಾಗಿ ಯುವತಿಯೊಂದಿಗೆ ಹೆಜ್ಜೆ ಹಾಕುವುದನ್ನು ಸಂಗಡಿಗರೇ ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಿಗೆ ಹರಿ ಬಿಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಜುನಾಥ್, ರಾಜಕೀಯದಲ್ಲಿ ತನ್ನ ಏಳ್ಗೆ ಸಹಿಸಲಾಗದೆ ನಕಲಿ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದಾರೆ. ಇದಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
