ಆಲ್ರೌಂಡ್ ಪ್ರದರ್ಶನದ ಮೂಲಕ ಗಮನ ಸೆಳೆದ ಅರ್ಜುನ್ ತೆಂಡುಲ್ಕರ್‌

First Published 12, Jan 2018, 1:08 PM IST
Arjun Tendulkar Delivers All round Performance at SCG
Highlights

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ‘ಸ್ಪಿರಿಟ್ ಆಫ್ ಕ್ರಿಕೆಟ್ ಗ್ಲೋಬಲ್ ಚಾಲೆಂಜ್’ ಪಂದ್ಯಾವಳಿಯಲ್ಲಿ ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾ ತಂಡವನ್ನು ಪ್ರತಿನಿಧಿಸುತ್ತಿರುವ, ಸಚಿನ್ ತೆಂಡುಲ್ಕರ್‌ರ ಪುತ್ರ ಅರ್ಜುನ್ ಆಲ್ರೌಂಡ್ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ.

ನವದೆಹಲಿ(ಜ.12): ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ‘ಸ್ಪಿರಿಟ್ ಆಫ್ ಕ್ರಿಕೆಟ್ ಗ್ಲೋಬಲ್ ಚಾಲೆಂಜ್’ ಪಂದ್ಯಾವಳಿಯಲ್ಲಿ ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾ ತಂಡವನ್ನು ಪ್ರತಿನಿಧಿಸುತ್ತಿರುವ, ಸಚಿನ್ ತೆಂಡುಲ್ಕರ್‌ರ ಪುತ್ರ ಅರ್ಜುನ್ ಆಲ್ರೌಂಡ್ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ.

ಟಿ20 ಪಂದ್ಯದಲ್ಲಿ ಕೇವಲ 27 ಎಸೆತಗಳಲ್ಲಿ 48 ರನ್ ಸಿಡಿಸಿದ ಅರ್ಜುನ್ ತೆಂಡುಲ್ಕರ್, 4 ಓವರ್ ಬೌಲ್ ಮಾಡಿ 4 ವಿಕೆಟ್ ಕಬಳಿಸಿದ್ದಾರೆ. ಜ.7ರಿಂದ ಆರಂಭಗೊಂಡಿರುವ ಈ ಟೂರ್ನಿ, ಜ.14ರ ವರೆಗೂ ನಡೆಯಲಿದ್ದು ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ಶ್ರೀಲಂಕಾ, ಸಿಂಗಾಪುರ್, ಹಾಂಕಾಂಗ್‌ನ 8 ಪ್ರತಿಷ್ಠಿತ ಕ್ಲಬ್‌ಗಳು ಪಾಲ್ಗೊಂಡಿವೆ.

loader