ಅಮರನಾಥ ಯಾತ್ರಾರ್ಥಿಗಳ ಮೇಲೆ ಉಗ್ರಗಾಮಿಗಳ ದಾಳಿಯ ನಂತರ ಕಣಿವೆ ಪ್ರದೇಶದಲ್ಲಿ ಭದ್ರತೆಯನ್ನು ಇನ್ನಷ್ಟು ಬಲಗೊಳಿಸುವ ಬಗ್ಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅಧಿಕಾರಿಗಳ ಜೊತೆ ಶ್ರೀನಗರದಲ್ಲಿ ಸಭೆ ನಡೆಸಿದ್ದಾರೆ.
ನವದೆಹಲಿ (ಜು.11): ಅಮರನಾಥ ಯಾತ್ರಾರ್ಥಿಗಳ ಮೇಲೆ ಉಗ್ರಗಾಮಿಗಳ ದಾಳಿಯ ನಂತರ ಕಣಿವೆ ಪ್ರದೇಶದಲ್ಲಿ ಭದ್ರತೆಯನ್ನು ಇನ್ನಷ್ಟು ಬಲಗೊಳಿಸುವ ಬಗ್ಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅಧಿಕಾರಿಗಳ ಜೊತೆ ಶ್ರೀನಗರದಲ್ಲಿ ಸಭೆ ನಡೆಸಿದ್ದಾರೆ.
ಅಮರನಾಥ್ ಯಾತ್ರೆಯಲ್ಲಿ ಉಗ್ರರ ಅಟ್ಟಹಾಸಕ್ಕೆ ಬಲಿಯಾದ 7 ಯಾತ್ರಾರ್ಥಿಗಳ ಕುಟುಂಬಕ್ಕೆ ಕೇಂದ್ರ ಸರ್ಕಾರ ತಲಾ 7 ಲಕ್ಷ ರೂ. ಪರಿಹಾರ ಘೋಷಿಸಿದೆ. ಗಾಯಗೊಂಡವರಿಗೆ 1 ಲಕ್ಷ ರೂ ಪರಿಹಾರ ಘೋಷಿಸಿದೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಯೋತ್ಪಾದಕರ ದಾಳಿಯನ್ನು ಖಂಡಿಸಿದ್ದು, ದಾಳಿಯ ಹಿಂದಿರುವವರನ್ನು ಪತ್ತೆ ಹಚ್ಚಿ ಸರಿಯಾಗಿ ಶಿಕ್ಷೆ ವಿಧಿಸಿ ಮೃತಪಟ್ಟವರಿಗೆ ನ್ಯಾಯ ಒದಗಿಸಿ ಎಂದು ಜಮ್ಮು-ಕಾಶ್ಮೀರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಈ ದಾಳಿಯನ್ನು ಖಂಡಿಸಿದ್ದು ಕಾಶ್ಮೀರ ಸರ್ಕಾರಕ್ಕೆ ಇನ್ನಷ್ಟು ಸಹಾಯ ಹಸ್ತ ಚಾಚಿದ್ದಾರೆ.
